ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪಡೆಯುವುದು ನನ್ನ ಭಾಗ್ಯ
ಅನಾರೋಗ್ಯದ ಕಾರಣದಿಂದ ಸಮಾರಂಭಕ್ಕೆ ದೇವೇಗೌಡರು ಗೈರು
ಪದ್ಮನಾಭನಗರದ ನಿವಾಸದಲ್ಲೇ ಪ್ರಶಸ್ತಿ ಪ್ರದಾನ ಮಾಡಿದ ಗಣ್ಯರು
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಅನಾರೋಗ್ಯ ಕಾರಣದಿಂದಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಪದ್ಮನಾಭನಗರದ ನಿವಾಸದಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ನಾಡಿನ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪರಿಷತ್ತಿನಲ್ಲಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಆದ್ರೆ ಮಾಜಿ ಪ್ರಧಾನಿ ದೇವೇಗೌಡರಿಗೆ ಅನಾರೋಗ್ಯದ ಕಾರಣದಿಂದ ಸಮಾರಂಭಕ್ಕೆ ಗೈರಾಗಿದ್ದರು. ಹೀಗಾಗಿ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಎಂ.ಎನ್ ವೆಂಕಟಾಚಲಯ್ಯ, ಹಾಗೂ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಸೇರಿದಂತೆ ಇತರೆ ಗಣ್ಯರು ಭೇಟಿ ನೀಡಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕೊಂಚ ಮಟ್ಟಿಗೆ ಅನಾರೋಗ್ಯದಿಂದ ದೇಹದಲ್ಲಿ ತುಸು ನಿತ್ರಾಣವಿದೆ. ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಹೇಳಿದ್ದಾರೆ. ಹೀಗಾಗಿ ಸಮಾರಂಭಕ್ಕೆ ಬರಲಾಗಲಿಲ್ಲ. ಇವರ ಪ್ರೀತಿ, ವಿಶ್ವಾಸಕ್ಕೆ ನಾನು ಕೃತಜ್ಞನಾಗಿದ್ದೇನೆ. ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ಪಡೆಯುವುದು ನನ್ನ ಭಾಗ್ಯ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ