newsfirstkannada.com

ಕಾಂಗ್ರೆಸ್‌ ಜೊತೆ ಕೈ ಜೋಡಿಸಿದ್ರಾ ಸಿ.ಪಿ ಯೋಗೇಶ್ವರ್ ಪುತ್ರಿ ನಿಶಾ? ಎದುರಾಳಿಗೆ ಡಿ.ಕೆ ಸುರೇಶ್ ಚೆಕ್‌ಮೇಟ್‌!

Share :

Published March 4, 2024 at 5:48pm

Update March 4, 2024 at 5:53pm

    ಕೊನೋಗೂ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಿಶಾ ಯೋಗೇಶ್ವರ್?

    ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಲು ಯೋಗೇಶ್ವರ್ ಪ್ರಯತ್ನ

    ಕಾಂಗ್ರೆಸ್ ನಾಯಕರ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಸಿಪಿವೈ ಪುತ್ರಿ

ರಾಮನಗರ: ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಅವರು ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ.

ಬೆಂಗಳೂರು ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣನವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಬೆಂಗಳೂರಲ್ಲಿ ನಡೀತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ಡಿ‌‌.ಕೆ ಸುರೇಶ್ ಜೊತೆ ನಿಶಾ ಯೋಗೇಶ್ವರ್ ಕಾಣಿಸಿಕೊಳ್ಳುವ ಮೂಲಕ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ರಣರಂಗಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಕಣಕ್ಕಿಳಿಯಲ್ಲಿದ್ದಾರೆ ಎನ್ನುವ ಸುದ್ದಿಯಿದೆ. ಇದರ ನಡುವೆ, ಯೋಗೇಶ್ವರ್ ಪುತ್ರಿ, ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಂಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ರಘುನಂದನ್ ರಾಮಣ್ಣನವರಿಗೆ ಶುಭಕೋರುವ ಸಲುವಾಗಿ ನಿಶಾ ಯೋಗೇಶ್ವರ್ ಕಚೇರಿಗೆ ಹೋಗಿದ್ದಾರೆ. ಆದ್ರೆ ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಿಶಾ ಯೋಗೇಶ್ವರ್ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎನ್ನುವ ಗುಸುಗುಸು ಕೇಳಿಬಂದಿತ್ತು. ಈ ಎಲ್ಲದರ ನಡುವೆ ಕಾಂಗ್ರೆಸ್ ನಾಯಕರ ಕಾರ್ಯಕ್ರಮದಲ್ಲಿ ನಿಶಾ ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: 28 ಲೋಕಸಭಾ ಕ್ಷೇತ್ರಕ್ಕೂ ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ಫೈನಲ್.. ಯಾರ್ ಯಾರಿದ್ದಾರೆ?

ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದ ನಿಶಾ?
2023ರ ವಿಧಾನಸಭಾ ಚುನಾವಣೆ ಮುಗಿದ ಬಳಿಕ ನಿಶಾ ಯೋಗೇಶ್ವರ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿದ್ದಾರೆ. ತಂದೆಯ ಜೊತೆ ಡಿ.ಕೆ ಶಿವಕುಮಾರ್​ ಅವರಿಗೆ ರಾಜಕೀಯ ವೈರತ್ವ ಇದ್ದರೂ ಡಿಕೆ ಬ್ರದರ್ಸ್‌ ಅನ್ನು ನಿಶಾ ಅವರು ಭೇಟಿ ಆಗಿರೋದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್‌ ಜೊತೆ ಕೈ ಜೋಡಿಸಿದ್ರಾ ಸಿ.ಪಿ ಯೋಗೇಶ್ವರ್ ಪುತ್ರಿ ನಿಶಾ? ಎದುರಾಳಿಗೆ ಡಿ.ಕೆ ಸುರೇಶ್ ಚೆಕ್‌ಮೇಟ್‌!

https://newsfirstlive.com/wp-content/uploads/2024/03/Cp-Yogeshwar-Doughter-in-Congress.jpg

Load More