ಬೆಂಗಳೂರಿಗರೇ.. ಇಂದು ಗುಡುಗು ಸಹಿತ ಮಳೆ ಬರುವ ಸಾಧ್ಯತೆ.. ಬೇಗ ಗೂಡು ಸೇರಿಕೊಳ್ಳಿ

author-image
AS Harshith
Updated On
ಬೆಂಗಳೂರಿಗರೇ.. ಇಂದು ಗುಡುಗು ಸಹಿತ ಮಳೆ ಬರುವ ಸಾಧ್ಯತೆ.. ಬೇಗ ಗೂಡು ಸೇರಿಕೊಳ್ಳಿ
Advertisment
  • ಯಲ್ಲೋ ಅಲರ್ಟ್ ಘೋಷಣೆ ಮಾಡಿದ ಹವಮಾನ ಇಲಾಖೆ
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲೂ ಮಳೆ ಬೀಳಲಿದೆ
  • ಈ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ

ಬೆಂಗಳೂರು: ನಗರದಲ್ಲಿ ಕಳೆ ಕೆಲ ದಿನದಿಂದ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮಳೆ ಎಂಟ್ರಿ ಕೊಡುತ್ತಿದೆ. ಅದರಂತೆಯೇ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕೂಡ ರಾಜಧಾನಿಯಲ್ಲಿ ವರಣ ಅಬ್ಬರಿಸಲಿದ್ದಾನೆ. ಹೀಗಾಗಿ ಬೆಂಗಳೂರಿನಲ್ಲಿಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಕೂಡ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ ರಾಯಚೂರು, ಯಾದಗಿರಿಯಲ್ಲಿ ಮಳೆ ಬೀಳಲಿದೆ ಎಂದು ಹೇಳಿದೆ.

ಇದನ್ನೂ ಓದಿ: ಭೀಕರ ಮಳೆ, ಸಿಡಿಲು ಬಡಿದು 6 ಸಾವು, ಮುಂದುವರೆದ ವರುಣಾರ್ಭಟ.. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರಲ್ಲೂ ಮಳೆಯಾಗೋ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇದನ್ನೂ ಓದಿ: ಇಂದು ಕೂಡ ಧಾರಾಕಾರ ಮಳೆ.. 4 ಜಿಲ್ಲೆಗಳಿಗೆ ಅಲರ್ಟ್; ಮನೆಗಳಿಗೆ ನುಗ್ಗಿದ ನೀರು, ಬೆಳೆ ಎಲ್ಲ ಜಲಾವೃತ

ಕೆಲ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಆ. 25ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment