/newsfirstlive-kannada/media/post_attachments/wp-content/uploads/2023/11/DKS-9.jpg)
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಡಿಸಿಎಂ ಡಿ.ಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ನಿರ್ಧಾರ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.
ಇದೀಗ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿದ್ದ ಯತ್ನಾಳ್..!
ಯಾವಾಗ ರಾಜ್ಯ ಸರ್ಕಾರ, ಸಿಬಿಐ ತನಿಖೆಯಿಂದ ಡಿ.ಕೆ.ಶಿವಕುಮಾರ್​ಗೆ ಮುಕ್ತಿ ನೀಡಲು ಕ್ರಮ ತೆಗೆದುಕೊಂಡಿತ್ತೋ, ಅಂದೇ ಯತ್ನಾಳ ಖಂಡಿಸಿದ್ದರು. ಅಲ್ಲದೇ ಸರ್ಕಾರದ ನಿರ್ಧಾರವನ್ನು ನಾನು ಚಾಲೆಂಜ್ ಮಾಡುತ್ತೇನೆ ಎಂದಿದ್ದರು. ಅದರಂತೆ ಇದೀಗ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.
I will challenge the withdrawal of the Dissapropriation of Assets case against DK Shivakumar in the Court.
Government should reconsider withdrawl of Corruption Case. @ANI@PTI_Newshttps://t.co/xflu2XshCs— Basanagouda R Patil (Yatnal) (@BasanagoudaBJP) November 24, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us