/newsfirstlive-kannada/media/post_attachments/wp-content/uploads/2024/12/YATNAL-VS-VIJAYENDRA.jpg)
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.
ಇನ್ನು, ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ನೋಟಿಸ್‌ನಲ್ಲಿ ಏನಿದೆ?
ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೀಡಿದ್ದ ಶೋಕಾಸ್ ನೋಟಿಸ್‌ಗೆ ನೀವು ನೀಡಿದ್ದ ಪ್ರತಿಕ್ರಿಯೆಯನ್ನು ಪರಿಗಣಿಸಿದ್ದೇವೆ. ಉತ್ತಮ ನಡವಳಿಕೆ ಭರವಸೆ ನೀಡಿದ ಬಳಿಕವೂ ಪಕ್ಷದ ಶಿಸ್ತನ್ನು ಮತ್ತೆ ಮತ್ತೆ ಉಲ್ಲಂಘಿಸಿದ್ದೀರಿ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ನಿಮ್ಮನ್ನು ಉಚ್ಚಾಟನೆ ಮಾಡಿದ್ದೇವೆ ಎಂದು ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಗ್ರಾಹಕರಿಗೆ ಗುಡ್ನ್ಯೂಸ್; ಕಡಿಮೆ ದರದಲ್ಲಿ ಹಲವು ಬೆನಿಫಿಟ್ಸ್; ಏನಿದು BSNL ಹೊಸ ಪ್ಲಾನ್?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ