/newsfirstlive-kannada/media/post_attachments/wp-content/uploads/2024/11/Team-India-Women-2.jpg)
ಟೀಮ್ ಇಂಡಿಯಾ, ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಸರಣಿ ಶುರುವಾಗಲು ಇನ್ನೇನು 2 ದಿನಗಳು ಬಾಕಿ ಇವೆ. ಇದೇ ತಿಂಗಳು ನವೆಂಬರ್ 22ನೇ ತಾರೀಕಿನಂದು ಪರ್ತ್ನಲ್ಲಿ ಮೊದಲ ಟೆಸ್ಟ್ ಆರಂಭವಾಗಲಿದೆ. ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಮಹತ್ವದ ಟೆಸ್ಟ್ ಸರಣಿಗೆ ಕ್ರೀಡಾಭಿಮಾನಿಗಳು ಕಾಯುತ್ತಲೇ ಇದ್ದಾರೆ. ಇದರ ಮಧ್ಯೆ ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಮಹಿಳಾ ತಂಡ ಪ್ರಕಟಿಸಿದೆ.
ಬಿಸಿಸಿಐ ಅನೌನ್ಸ್ ಮಾಡಿರೋ ತಂಡದಲ್ಲಿ 16 ಸದಸ್ಯರು ಸ್ಥಾನ ಪಡೆದುಕೊಂಡಿದ್ದಾರೆ. 16 ಸದಸ್ಯರ ತಂಡವನ್ನು ಟೀಮ್ ಇಂಡಿಯಾದ ಅನುಭವಿ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ಓಪನರ್ ಆಗಿರೋ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದನಾಗೆ ವೈಸ್ ಕ್ಯಾಪ್ಟನ್ಸಿ ಪಟ್ಟ ಕಟ್ಟಲಾಗಿದೆ.
ಸ್ಟಾರ್ ಆಟಗಾರರಿಗೆ ಗೇಟ್ಪಾಸ್
ಭಾರತ ಮಹಿಳಾ ತಂಡದ ವಿಕೆಟ್ ಕೀಪಿಂಗ್ ಸ್ಥಾನದಲ್ಲಿ ಯಾಸ್ತಿಕಾ ಭಾಟಿಯಾ ಮತ್ತು ರಿಚಾ ಘೋಷ್ ಅವರಿಗೆ ಅವಕಾಶ ಸಿಕ್ಕಿದೆ. ಸ್ಟಾರ್ ಆಟಗಾರ್ತಿ ಶೆಫಾಲಿ ವರ್ಮಾಗೆ ಗೇಟ್ ಪಾಸ್ ನೀಡಲಾಗಿದೆ. ಇವರು ಭಾರತ ಪರ ಆಡಿದ್ದ ಕಳೆದ 6 ಏಕದಿನ ಪಂದ್ಯಗಳಲ್ಲಿ ಕೇವಲ 106 ರನ್ ಗಳಿಸಿದ್ರು. ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರಿಗೂ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.
ಏಕದಿನ ಸರಣಿ ಯಾವಾಗ?
ಏಕದಿನ ಸರಣಿ ಡಿಸೆಂಬರ್ 5ನೇ ತಾರೀಕಿನಿಂದ ಶುರುವಾಗಲಿದೆ. ಬ್ರಿಸ್ಬೇನ್ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ಮೊದಲ ಪಂದ್ಯ ನಡೆಯಲಿದೆ. ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿದ್ದ ಭಾರತ ತಂಡ ಆಸ್ಟ್ರೇಲಿಯಾವನ್ನು ಮಣಿಸಲು ಮುಂದಾಗಿದೆ.
ಟೀಮ್ ಇಂಡಿಯಾ ಹೀಗಿದೆ..!
ಹರ್ಮನ್‌ಪ್ರೀತ್ ಕೌರ್ (ಕ್ಯಾಪ್ಟನ್), ಸ್ಮೃತಿ ಮಂಧಾನ (ಉಪ ನಾಯಕಿ), ಪ್ರಿಯಾ ಪುನಿಯಾ, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ತೇಜಲ್ ಹಸ್ಸಾಬ್ನಿಸ್, ದೀಪ್ತಿ ಶರ್ಮಾ, ಮಿನ್ನು ಮಣಿ, ಪ್ರಿಯಾ ಮಿಶ್ರಾ, ರಾಧಾ ಯಾದವ್ ಟಿಟಾಸ್ ಸಾಧು, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಸೈಮಾ ಠಾಕೂರ್.
ಇದನ್ನೂ ಓದಿ: ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆಯೋ ಪ್ಲ್ಯಾನ್; KL ರಾಹುಲ್ ಖರೀದಿಗೆ ಮುಂದಾದ ಚೆನ್ನೈ ಸೂಪರ್ ಕಿಂಗ್ಸ್
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್