/newsfirstlive-kannada/media/post_attachments/wp-content/uploads/2025/04/RCB_TEAM-1.jpg)
ಭಾರತ, ಪಾಕ್ ಸಂಘರ್ಷದ ಬೆನ್ನಲ್ಲೇ IPL ಪಂದ್ಯಗಳನ್ನು ಅಮಾನತುಗೊಳಿಸಲಾಗಿದೆ ಅನ್ನೋ ಸುದ್ದಿಯನ್ನ BCCI ತಳ್ಳಿ ಹಾಕಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿರುವ ಬಿಸಿಸಿಐ, 2025ರ ಐಪಿಎಲ್ ಪಂದ್ಯಗಳನ್ನು 1 ವಾರಗಳ ಕಾಲ ಮುಂದೂಡಿಕೆ ಮಾಡಲಾಗಿದೆ ಎಂದಿದೆ.
ನಿನ್ನೆ ಧರ್ಮಶಾಲಾದಲ್ಲಿ ನಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇಂದು ಲಕ್ನೋದಲ್ಲಿ RCB ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮ್ಯಾಚ್ ನಿಗದಿಯಾಗಿತ್ತು. ಆದರೆ ಭಾರತದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಐಪಿಎಲ್ ಪಂದ್ಯಗಳನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.
/newsfirstlive-kannada/media/post_attachments/wp-content/uploads/2025/03/IPL_2025-1.jpg)
ಐಪಿಎಲ್ ಸೀಸನ್ 18ರ ಟೂರ್ನಿಯ ಹಿನ್ನೆಲೆಯಲ್ಲಿ ವಿದೇಶಿ ಆಟಗಾರರು ಭಾರತದಲ್ಲಿದ್ದಾರೆ. ಕಳೆದ 2 ತಿಂಗಳಿಂದ ಐಪಿಎಲ್ ಪಂದ್ಯಗಳು ಸಾರಾಗವಾಗಿ ನಡೆಯುತ್ತಿದೆ. ಐಪಿಎಲ್ ಸೀಸನ್ 18ರಲ್ಲಿ ಇನ್ನೂ 16 ಪಂದ್ಯಗಳು ಬಾಕಿ ಉಳಿದಿದೆ. ಹೀಗಿರುವಾಗ ಕ್ರಿಕೆಟಿಗರ ಭದ್ರತೆ ಹಾಗೂ ಸೇನಾ ಕಾರ್ಯಾಚರಣೆಗೆ ಬೆಂಬಲ ನೀಡುವ ಹಿನ್ನೆಲೆಯಲ್ಲಿ ಬಿಸಿಸಿಐ ಐಪಿಎಲ್ ಪಂದ್ಯಗಳನ್ನು ಅನಿವಾರ್ಯವಾಗಿ ಮುಂದೂಡಿಕೆ ಮಾಡಿದೆ.
ಇದನ್ನೂ ಓದಿ: IPL ಟೂರ್ನಿ ದಿಢೀರ್ ಅಮಾನತು.. ವಿರಾಟ್ ಕೊಹ್ಲಿ ಮೊದಲ ರಿಯಾಕ್ಷನ್ ಏನು?
ಐಪಿಎಲ್ ಪಂದ್ಯಗಳನ್ನು 1 ವಾರಗಳ ಮಟ್ಟಿಗೆ ಮುಂದೂಡಿಕೆ ಮಾಡಲಾಗಿದೆ. ಫ್ರಾಂಚೈಸಿಗಳ ಮನವಿ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೇವೆ. ವಾರದ ಬಳಿಕ ಮುಂದಿನ ಪರಿಸ್ಥಿತಿಗೆ ಅನುಗುಣವಾಗಿ ಉಳಿದ 16 ಐಪಿಎಲ್ ಪಂದ್ಯಗಳಿಗೆ ಹೊಸ ವೇಳಾಪಟ್ಟಿ ಪ್ರಕಟ ಮಾಡಲಾಗುತ್ತದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ ಫಸ್ಟ್ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us