Advertisment

ಶುಭ್ಮನ್‌ ಗಿಲ್‌ಗೆ ನಾಯಕನ ಪಟ್ಟ.. ಟೆಸ್ಟ್‌ ಸರಣಿಗೆ ಟೀಂ ಇಂಡಿಯಾ ಪ್ರಕಟ; ಯಾರಿಗೆಲ್ಲಾ ಚಾನ್ಸ್‌?

author-image
admin
Updated On
ಶುಭ್ಮನ್‌ ಗಿಲ್‌ಗೆ ನಾಯಕನ ಪಟ್ಟ.. ಟೆಸ್ಟ್‌ ಸರಣಿಗೆ ಟೀಂ ಇಂಡಿಯಾ ಪ್ರಕಟ; ಯಾರಿಗೆಲ್ಲಾ ಚಾನ್ಸ್‌?
Advertisment
  • ನೂತನ ನಾಯಕ ಶುಭ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಪ್ರಕಟ
  • ರಿಷಬ್ ಪಂತ್ ಉಪನಾಯಕ ಹಾಗೂ ವಿಕೆಟ್ ಕೀಪರ್ ಆಗಿ ಆಯ್ಕೆ
  • ಆರಂಭಿಕನಾಗಿ ಕನ್ನಡಿಗ ಕೆ.ಎಲ್.ರಾಹುಲ್​ಗೆ ಟೆಸ್ಟ್​ ತಂಡದಲ್ಲಿ ಸ್ಥಾನ

ಐಪಿಎಲ್ ಬಳಿಕ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್‌ ವಿರುದ್ಧ ನಡೆಯುವ ಟೆಸ್ಟ್ ಸರಣಿಗೆ BCCI ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ.

Advertisment

ನಿರೀಕ್ಷೆಯಂತೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆಯ ಬಳಿಕ ಯುವ ಆಟಗಾರ ಶುಭ್ಮನ್ ಗಿಲ್‌ ಅವರಿಗೆ ಬಿಸಿಸಿಐ ಮಣೆ ಹಾಕಿದೆ. ನೂತನ ನಾಯಕ ಶುಭ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ ಮಾಡಲಾಗಿದೆ.

publive-image

ಶುಭ್ಮನ್ ಗಿಲ್‌ ಅವರು ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲಾಗಿದ್ದಾರೆ. ಇದೇ ವೇಳೆ ಇಂಗ್ಲೆಂಡ್ ಪ್ರವಾಸಕ್ಕೆ 18 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: ಏಕಾನಾ ಸ್ಟೇಡಿಯಂನಲ್ಲಿ RCB ಎಡವಿದ್ದು ಎಲ್ಲಿ? ನಾಯಕ ಜಿತೇಶ್​ ಶರ್ಮಾ ಹೊಣೆ ಮಾಡಿದ್ದು ಯಾರನ್ನ? 

Advertisment

ಭಾರತ ಟೆಸ್ಟ್ ತಂಡ ಹೀಗಿದೆ 
ಶುಭ್ಮನ್ ಗಿಲ್‌ ನಾಯಕ, ರಿಷಬ್ ಪಂತ್ ಉಪನಾಯಕ ಹಾಗೂ ವಿಕೆಟ್ ಕೀಪರ್ ಆಗಿ ಆಯ್ಕೆ ಆಗಿದ್ದಾರೆ. ಇನ್ನುಳಿದಂತೆ ಯಶಸ್ವಿ ಜೈಸ್ವಾಲ್, ಕೆ.ಎಲ್ ರಾಹುಲ್, ಸಾಯಿ ಸುಧರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್​, ನಿತಿಶ್ ಕುಮಾರ್​ ರೆಡ್ಡಿ, ಧ್ರುವ್ ಜುರೇಲ್, ಆಲ್​ರೌಂಡರ್​ಗಳಾದ ರವೀಂದ್ರ ಜಡೇಜಾ, ವಾಷಿಗ್ಟಂನ್ ಸುಂದರ್. ಶಾರ್ದೂಲ್ ಠಾಕೂರ್ ಸ್ಥಾನ ಪಡೆದ್ರೆ, ವೇಗಿಗಳ ಕೋಟಾದಲ್ಲಿ ಜಸ್​ಪ್ರಿತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್​ ದೀಪ್ ಯಾದವ್, ಆರ್ಶ್​ದೀಪ್ ಸಿಂಗ್​ಗೆ ಅವಕಾಶ ನೀಡಲಾಗಿದೆ.

publive-image

ಮೂವರು ಕನ್ನಡಿಗರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ
ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೂವರು ಕನ್ನಡಿಗರು ಆಯ್ಕೆಯಾಗಿದ್ದಾರೆ. ಆರಂಭಿಕನಾಗಿ ಕನ್ನಡಿಗ ಕೆ.ಎಲ್.ರಾಹುಲ್​ಗೆ ಟೆಸ್ಟ್​ ತಂಡದಲ್ಲಿ ಸ್ಥಾನ ಉಳಿಸಿಕೊಂಡ್ರೆ. ಐಪಿಎಲ್ ಹಾಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಬುತ ಪ್ರದರ್ಶನ ನೀಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ವೇಗಿಗಳ ಕೋಟಾದಲ್ಲಿ ಚಾನ್ಸ್ ಗಿಟ್ಟಿಸಿದ್ದಾರೆ. 8 ವರ್ಷಗಳ ಬಳಿಕ ಕರುಣ್ ನಾಯರ್ ಟೆಸ್ಟ್ ತಂಡಕ್ಕೆ ಕಮ್​ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment
Advertisment
Advertisment
Advertisment