BCCI ಅಧ್ಯಕ್ಷ ರೋಜರ್ ಬಿನ್ನಿ ಅವರಿಗೆ ಪೊಲೀಸರಿಂದ ನೋಟಿಸ್
ವಿಶ್ವಕಪ್ ಬ್ಲಾಕ್ ಟಿಕೆಟ್ ಮಾರಾಟ ಮಾಡಿದ ಆರೋಪ
19 ಜನರನ್ನು ಬಂಧಿಸಿದ ಕೋಲ್ಕತ್ತಾ ಪೊಲೀಸರು
ಇಂದು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯ ನಡೆಯುತ್ತಿದ್ದು, ಈಡನ್ ಗಾರ್ಡನ್ ಮೈದಾನದಲ್ಲಿ ಟಾಸ್ ಗೆದ್ದ ರೋಹಿತ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ. ಇಂತಹ ಸಂತಸದ ವಿಚಾರದ ನಡುವೆ ಕೋಲ್ಕತ್ತಾ ಪೊಲೀಸರು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರಿಗೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ವಿಶ್ವಕಪ್ ಕ್ರಿಕೆಟ್ ಪಂದ್ಯದ ಟಿಕೆಟ್ಗಳನ್ನು ಬ್ಲಾಕ್ ಆಗಿ ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಈ ನೋಟಿಸ್ ಹೊರಡಿಸಲಾಗಿದೆ ಎನ್ನಲಾಗಿದೆ. ನಿನ್ನೆ ಸಂಜೆ ವೇಳೆ ನೋಟಿಸ್ ಕಳುಹಿಸಿದ್ದಾರೆ.
ಇನ್ನು ವಿಶ್ವಕಪ್ ಪಂದ್ಯ ಟಿಕೆಟ್ ಬ್ಲಾಕ್ ಆಗಿ ಸೇಲ್ ಮಾಡಿರುವ ಆರೋಪದ ಹಿನ್ನೆಲೆ 19 ಜನರನ್ನು ಬಂಧಿಸಿದ್ದಾರೆ ಮತ್ತು ಅವರಿಂದ 108 ಟಿಕೆಟ್ ವಶಪಡಿಸಿಕೊಂಡಿದ್ದಾರೆ. ಇವರ ಮೇಲೆ ಏಳು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ