ಕೊಹ್ಲಿ, ರೋಹಿತ್​ಗೆ ಕೊನೆಯ ಅವಕಾಶ; ಸ್ಟಾರ್​​ ಆಟಗಾರರಿಗೆ ಬಿಸಿಸಿಐ ಕೊಟ್ಟ ಖಡಕ್​ ವಾರ್ನಿಂಗ್​ ಏನು?

author-image
Ganesh Nachikethu
Updated On
ಇಂಗ್ಲೆಂಡ್​ ವಿರುದ್ಧ ಏಕದಿನ ಸರಣಿ; ಟೀಮ್​ ಇಂಡಿಯಾದಿಂದ ರೋಹಿತ್​​, ಕೊಹ್ಲಿಗೆ ಕೊಕ್
Advertisment
  • ಇಂಗ್ಲೆಂಡ್​​ ವಿರುದ್ಧ ಏಕದಿನ ಸರಣಿಗೆ ಸಜ್ಜಾದ ಟೀಮ್​ ಇಂಡಿಯಾ
  • ಈ ಹೊತ್ತಲ್ಲೇ ಟೀಮ್​ ಇಂಡಿಯಾ ಅಭಿಮಾನಿಗಳಿಗೆ ಬಿಗ್​ ಶಾಕ್​​!
  • ಟೀಮ್​ ಇಂಡಿಯಾ ಕ್ಯಾಪ್ಟನ್​ ರೋಹಿತ್​​, ಕೊಹ್ಲಿಗೆ ಕೊನೆಯ ಚಾನ್ಸ್​​

ಬಹುನಿರೀಕ್ಷಿತ ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್​ ಸರಣಿ ಮುಗಿದಿದೆ. ಈ ಬೆನ್ನಲ್ಲೇ ಟೀಮ್​ ಇಂಡಿಯಾ ಇಂಗ್ಲೆಂಡ್​​ ವಿರುದ್ಧ ಏಕದಿನ ಹಾಗೂ ಟಿ20 ಸರಣಿ ಆಡಲು ಸಜ್ಜಾಗಿದೆ. ಇಂಗ್ಲೆಂಡ್ ಮತ್ತು ಟೀಮ್​ ಇಂಡಿಯಾ ನಡುವಿನ ಟಿ20 ಸರಣಿ ಜನವರಿ 22ರಿಂದ ಶುರುವಾಗಲಿದೆ. ಇದಾದ ಬಳಿಕ ಏಕದಿನ ಸರಣಿ ಶುರುವಾಗಲಿದ್ದು, ಫೆಬ್ರವರಿ 12ಕ್ಕೆ ಕೊನೆ ಮ್ಯಾಚ್​​​ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ಮಧ್ಯೆ 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಟಿ20 ಸರಣಿಯ ಮೊದಲ ಪಂದ್ಯ ಜನವರಿ 22 ರಂದು ನಡೆಯಲಿದೆ. ಇದಾದ ನಂತರ ಫೆಬ್ರವರಿ 6 ರಿಂದ ಫೆಬ್ರವರಿ 12 ರವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಬಲಿಷ್ಠ ತಂಡ ಪ್ರಕಟಿಸಲು ಮುಂದಾದ ಬಿಸಿಸಿಐ

ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ 5 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿದೆ. ಮುಂದೆ ಇಂಗ್ಲೆಂಡ್​​ ವಿರುದ್ಧ ಏಕದಿನ ಸರಣಿ ನಡೆಯಲಿದ್ದು, ಬಲಿಷ್ಠ ಟೀಮ್​ ಇಂಡಿಯಾ ಪ್ರಕಟಿಸಲು ಬಿಸಿಸಿಐ ಮುಂದಾಗಿದೆ.

ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯೋ ಟೀಮ್​​ ಇಂಡಿಯಾ ಆಟಗಾರರೇ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾಗವಾಗಲಿದ್ದಾರೆ. ಹೀಗಾಗಿ ಟೀಮ್​ ಇಂಡಿಯಾದಲ್ಲಿ ಯಾರಿಗೆ ಅವಕಾಶ ಸಿಗಲಿದೆ? ಅನ್ನೋ ಕುತೂಹಲ ಹೆಚ್ಚಾಗಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆಡಲು ಕರ್ನಾಟಕದ ಇಬ್ಬರು ಸ್ಟಾರ್ ಆಟಗಾರರು ಎದುರು ನೋಡುತ್ತಿದ್ದಾರೆ.

ಕೊಹ್ಲಿ, ರೋಹಿತ್​ಗೆ ಕೊನೆಯ ಅವಕಾಶ

ಟೀಮ್​ ಇಂಡಿಯಾ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭವಿಷ್ಯದ ಬಗ್ಗೆ ಬಿಸಿಸಿಐ ಗಂಭೀರ ಚಿಂತನೆ ನಡೆಸಿದೆ. ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್​ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಇಬ್ಬರು ವಿಫಲರಾಗಿದ್ರು. ಹಾಗಾಗಿ ರೋಹಿತ್​​, ಕೊಹ್ಲಿ ಭವಿಷ್ಯದ ಬಗ್ಗೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಕೋಚ್ ಗೌತಮ್ ಗಂಭೀರ್ ಚರ್ಚೆ ನಡೆಸಿದ್ದಾರೆ. ಈ ಇಬ್ಬರೂ ಆಟಗಾರರಿಗೆ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಇದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅಬ್ಬರಿಸದೇ ಇದ್ದರೆ ಇವರ ಕ್ರಿಕೆಟ್​ ಕರಿಯರ್​ ಅಂತ್ಯವಾಗಲಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿ ಹೇಗಿತ್ತು ಪ್ರದರ್ಶನ?

ಕೊಹ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಇವರು ಪರ್ತ್‌ನಲ್ಲಿ ಶತಕ ಬಾರಿಸಿದ್ದು ಬಿಟ್ಟರೆ ಉಳಿದೆಲ್ಲಾ ಪಂದ್ಯಗಳಲ್ಲಿ ಮೌನಕ್ಕೆ ಶರಣಾಗಿದ್ದರು. ಕೊಹ್ಲಿ ಆಡಿದ 5 ಟೆಸ್ಟ್‌ ಪಂದ್ಯಗಳಲ್ಲಿ 190 ರನ್‌ ಕಲೆ ಹಾಕಿದ್ದಾರೆ. ಕ್ಯಾಪ್ಟನ್‌ ರೋಹಿತ್ ಶರ್ಮಾ ಸಹ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರು ಸಿಡ್ನಿ ಟೆಸ್ಟ್‌ ಪಂದ್ಯದಿಂದ ಹಿಂದೆ ಸರಿದಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment