ಭಾರೀ ಕುತೂಹಲ ಮೂಡಿಸಿದ 2025ರ ಇಂಡಿಯನ್ ಪ್ರೀಮಿಯರ್ ಲೀಗ್
ಇದೇ ವರ್ಷದ ಕೊನೆ ತಿಂಗಳಲ್ಲಿ ನಡೆಯಲಿರೋ ಐಪಿಎಲ್ ಮೆಗಾ ಹರಾಜು
ಬಿಸಿಸಿಐ ಮಹತ್ವದ ನಿರ್ಧಾರಕ್ಕಾಗಿ ಕಾಯುತ್ತಿರೋ ಐಪಿಎಲ್ ತಂಡಗಳು!
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಭಾರೀ ಕುತೂಹಲ ಮೂಡಿಸಿದೆ. ವರ್ಷದ ಕೊನೆಗೆ ನಡೆಯಲಿರೋ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಇದಕ್ಕೂ ಮುನ್ನವೇ ಎಷ್ಟು ಜನರನ್ನು ರೀಟೈನ್ ಮಾಡಿಕೊಳ್ಳಬೇಕು? ಎಂದು ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ. ಹಾಗಾಗಿ ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐ ನಿರ್ಧಾರಕ್ಕಾಗಿ ಕಾಯುತ್ತಿವೆ.
ಇನ್ನು, ಮುಂದಿನ ಸೀಸನ್ಗೆ ಎಷ್ಟು ಮಂದಿ ಆಟಗಾರರನ್ನು ರೀಟೈನ್ ಮಾಡಿಕೊಳ್ಳಬೇಕು? ಎಂದು ಬಿಸಿಸಿಐ ಶೀಘ್ರದಲ್ಲೇ ಅನೌನ್ಸ್ ಮಾಡುವ ಸಾಧ್ಯತೆ ಇದೆ. ಇದರ ಮಧ್ಯೆ ಬಿಸಿಸಿಐ ಐಪಿಎಲ್ ಹರಾಜಿನಲ್ಲಿ ಫ್ರಾಂಚೈಸಿಗಳಿಗೆ 5 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ ಎನ್ನುವ ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ.
ಎರಡು ತಿಂಗಳ ಹಿಂದೆಯಷ್ಟೇ ಐಪಿಎಲ್ ತಂಡಗಳ ಎಲ್ಲಾ ಮಾಲೀಕರೊಂದಿಗೆ ಬಿಸಿಸಿಐ ಮಹತ್ವದ ಸಭೆ ನಡೆಸಿತ್ತು. ಈ ಸಭೆಯಲ್ಲಿ ಬಹುತೇಕ ತಂಡಗಳು 5-6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಬೇಡಿಕೆ ಇಟ್ಟಿದ್ದವು. ಈ ನಿರ್ಧಾರವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದೆ.
5 ವರ್ಷಕ್ಕೊಮ್ಮೆ ಮೆಗಾ ಹರಾಜು!
ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಇದುವರೆಗೂ 17 ವರ್ಷಗಳು ಕಳೆದಿವೆ. ಟೂರ್ನಿ ಆರಂಭದಿಂದಲೂ ಐಪಿಎಲ್ ತಂಡಗಳು 5 ವರ್ಷಗಳಿಗೊಮ್ಮೆ ಮೆಗಾ ಹರಾಜು ನಡೆಸಲು ಅವಕಾಶ ಮಾಡಿಕೊಡಿ ಎಂದು ಬಿಸಿಸಿಐ ಮುಂದೆ ಬೇಡಿಕೆ ಇಟ್ಟಿವೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ ಇವರ ಮುಂದೆ ಫುಲ್ ಸೈಲೆಂಟ್.. ತಾಯಿ, ಹೆಂಡತಿ ಅಲ್ಲವೇ ಅಲ್ಲ, ಮತ್ಯಾರು?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ