/newsfirstlive-kannada/media/post_attachments/wp-content/uploads/2024/05/Heavy-Rains-Karnataka.jpg)
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾದ ಫೆಂಗಲ್ ಸೈಕ್ಲೋನ್ ಇದು. ಈ ಚಂಡಮಾರುತ ತಮಿಳುನಾಡು ಮೂಲಕ ಕರ್ನಾಟಕದತ್ತ ಧಾವಿಸಿದೆ. ಇದರ ಪರಿಣಾಮ ಇಂದು ರಾತ್ರಿ ರಾಜ್ಯದ ಕರಾವಳಿ ಭಾಗದಲ್ಲಿ ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ಕೆಲವೇ ಗಂಟೆಗಳಲ್ಲಿ ಕರ್ನಾಟಕಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದೆ. ಹಾಗಾಗಿ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿ 9 ಗಂಟೆ ಮೇಲೆ ಭಾರೀ ಮಳೆ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಮಳೆ
ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಚಂಡಮಾರುತ ಪರಿಣಾಮ ಬೆಂಗಳೂರಿನ ಮೇಲೂ ಹೆಚ್ಚು ಗೋಚರಿಸಲಿದ್ದು, ಗುಡುಗು ಸಮೇತ ಮಳೆ ಬೀಳಲಿದೆ ಎಂದು ತಿಳಿದು ಬಂದಿದೆ.
ಎಲ್ಲೆಲ್ಲಿ ಮಳೆ?
ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರ, ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಕ್ರಿಕೆಟ್ ಅನ್ನೇ ಬಿಡಬೇಕು ಎಂದಿದ್ದ ಕೊಹ್ಲಿ ಆಪ್ತ; ಖರೀದಿ ಮಾಡಿ ಮರುಜೀವ ಕೊಟ್ಟ RCB
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ