ಬೆಳಗಾವಿಯ ಕನ್ನಡ ರಾಜ್ಯೋತ್ಸವ ಮೆರವಣಿಗೆ ಸೂಕ್ತ ಭದ್ರತೆ ನಿಯೋಜನೆ
ಮಹಾರಾಷ್ಟ್ರದ ಮೂವರು ಸಚಿವರು, ಸಂಸದನಿಗೆ ಗಡಿ ಪ್ರವೇಶ ನಿರ್ಬಂಧ
ಬೆಳಗಾವಿಯಲ್ಲಿ 18 ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಿರುವ ಜಿಲ್ಲಾಡಳಿತ
ಬೆಳಗಾವಿ: 68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿ ನಗರ ಮದುವಣಗಿತ್ತಿಯಂತೆ ಸಿದ್ಧಗೊಂಡಿದ್ದು ಎಲ್ಲಿ ನೋಡಿದರೂ ಹಳದಿ, ಕೆಂಪು ಬಣ್ಣದಿಂದ ಕಂಗೊಳಿಸುತ್ತಿದೆ. ಚನ್ನಮ್ಮನ ಸ್ಟ್ಯಾಚ್ ಸೇರಿದಂತೆ ಬೀದಿ ಬೀದಿಗಳಲ್ಲೂ ಕನ್ನಡಕ್ಕೆ ಸಂಬಂಧಿಸಿದ ಬ್ಯಾನರ್ ಅಳವಡಿಸುವುದರ ಜೊತೆಗೆ ಇಡೀ ನಗರವೇ ಶೃಂಗಾರವಾಗಿದ್ದರಿಂದ ಕನ್ನಡ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ಈ ಕನ್ನಡ ಹಬ್ಬದಲ್ಲಿ ಒಟ್ಟು 5 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ ಎಂದು ಹೇಳಲಾಗ್ತಿದೆ.
ನಗರದ ಚನ್ನಮ್ಮ ವೃತ್ತದಲ್ಲಿ ಪ್ರೇಕ್ಷಕರ ಗ್ಯಾಲರಿ ಹಾಗೂ ಚನ್ನಮ್ಮ ಮೂರ್ತಿಗೆ ಬಣ್ಣ ಬಳಿದು ತಯಾರಿ ಮಾಡಿದ್ದು, 5 ಲಕ್ಷಕ್ಕೂ ಅಧಿಕ ಜನರು ಭಾಗಿಯಾಗಲಿದ್ದಾರೆ. ಚನ್ನಮ್ಮ ವೃತ್ತ ಕೆಂಪು ಮತ್ತು ಹಳದಿ ಬಣ್ಣ ಹೊದ್ದು ನವವಧುವಿನಂತೆ ಕಂಗೊಳಿಸುತ್ತಿದೆ. ರಾಜ್ಯೋತ್ಸವದ ತಯಾರಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಅಶೋಕ್ ದುಡಗುಂಟಿ ವೀಕ್ಷಿಸಿ ರಾಜ್ಯೋತ್ಸವಕ್ಕೆ ಸಕಲ ರೀತಿ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಯುವಕರು ಭಾಗಿ
ಚನ್ನಮ್ಮ ವೃತ್ತದಿಂದ ಶನಿವಾರ ಕೂಟದವರೆಗೆ ಬೃಹತ್ ಮೆರವಣಿಗೆಯಲ್ಲಿ ನೂರು ರೂಪಕಗಳು ಮೆರವಣಿಗೆ ಮೂಲಕ ಸಾಗಲಿವೆ. ಇದರಲ್ಲಿ ಉತ್ತರ ಕರ್ನಾಟಕ ಹಲವು ಜಿಲ್ಲೆಗಳ ಯುವಕರು ಭಾಗಿಯಾಗಲಿದ್ದಾರೆ. ಮೆರವಣಿಗೆಯನ್ನು ವೀಕ್ಷಿಸಲು ಗ್ಯಾಲರಿ ನಿರ್ಮಾಣ ಮಾಡಲಾಗಿದ್ದು ಸಂಜೆವರೆಗೆ ಈ ಅದ್ಧೂರಿ ಕನ್ನಡದ ಮೆರವಣಿಗೆ ನಡೆಯಲಿದೆ.
ಸಡಗರದ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆಯುಕ್ತರ ನೇತೃತ್ವದಲ್ಲಿ 2 ಡಿಸಿಪಿ, 12 ಡಿವೈಎಸ್‌ಪಿ, 120ಕ್ಕೂ ಹೆಚ್ಚು ಪಿಐ, 300 ಜನ ಪಿಎಸ್‌ಐ, 2,000 ಪೊಲೀಸ್ ಸಿಬ್ಬಂದಿ, 500 ಹೋಮ್ ಗಾರ್ಡ್ ಅನ್ನು ಭದ್ರತೆ ದೃಷ್ಟಿಯಿಂದ ನಿಯೋಜನೆ ಮಾಡಲಾಗಿದೆ. ಮಾರ್ಗದುದ್ದಕ್ಕೂ 300 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಸಚಿವರು, ಓರ್ವ ಸಂಸದನಿಗೆ ಗಡಿ ಪ್ರವೇಶ ನಿಷೇಧ
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಅದ್ಧೂರಿಯಾಗಿ ನಡೆಸುತ್ತಿದ್ದರೆ ಅತ್ತ ಎಂಇಎಸ್ನಿಂದ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸುತ್ತಿದ್ದಾರೆ. ಆದ್ರೆ ಇದಕ್ಕೆ ಜಿಲ್ಲಾಡಳಿತ ಅನುಮತಿಯನ್ನು ನೀಡಿಲ್ಲ. ಹೀಗಾಗಿ ಮಹಾರಾಷ್ಟ್ರದ ಮೂವರು ಸಚಿವರು ಹಾಗೂ ಓರ್ವ ಸಂಸದನಿಗೆ ಬೆಳಗಾವಿಯ ಗಡಿ ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ. ಅಲ್ಲದೇ ಗಡಿಯಲ್ಲಿ ಅವರು ಬರದಂತೆ ತಡೆಯಲು 18 ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಕರಾಳ ದಿನ ಆಚರಣೆ ಹೆಸರಲ್ಲಿ ಕಾನೂನು ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿಯ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಎಚ್ಚರಿಕೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ