newsfirstkannada.com

ಗ್ರಾಮದ 6ಕ್ಕೂ ಹೆಚ್ಚು ಮನೆಗಳಿಗೆ ರಾತ್ರೋರಾತ್ರಿ ಕನ್ನ.. ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಹಣ ಕದ್ದು ಪರಾರಿ

Share :

Published February 11, 2024 at 10:54am

  ಕಂಗಲಾದ ಮಾಲೀಕರು, ಕಳ್ಳತನದಿಂದ ಬೆಚ್ಚಿ ಬಿದ್ದಿರುವ ಗ್ರಾಮಸ್ಥರು

  ರಾತ್ರಿಯಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾದ ಕಳ್ಳರು

  ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಗ್ರಾಮ

ಬೆಳಗಾವಿ: ಹುಕ್ಕೇರಿ ತಾಲೂಕಿನ ನರಸಿನಂಗಪೂರ ಗ್ರಾಮದಲ್ಲಿ ರಾತ್ರಿ ವೇಳೆ 6ಕ್ಕೂ ಹೆಚ್ಚು ಮನೆಗಳಲ್ಲಿ ಹಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಕಳ್ಳರು ಎಸ್ಕೇಪ್ ಆಗಿದ್ದಾರೆ. ಇದರಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನರಸಿಂಗಪೂರ ಗ್ರಾಮ ಹೊಂದಿಕೊಂಡಿದೆ. ಈ ಗ್ರಾಮದಲ್ಲಿನ ಅಂಬೇಡ್ಕರ್​ ಗಲ್ಲಿ ಹಾಗೂ ಪಾಟೀಲ ಗಲ್ಲಿಯಲ್ಲಿ ತಡರಾತ್ರಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಯಾರು ಇಲ್ಲದ ಮನೆಗಳನ್ನೇ ಟಾರ್ಗೆಟ್ ಮಾಡಿರುವ ಖದೀಮರು ಮೊದಲೇ ಪ್ಲಾನ್ ರೂಪಿಸಿ 6ಕ್ಕೂ ಹೆಚ್ಚು ಮನೆಗಳಿಗೆ ರಾತ್ರೋರಾತ್ರಿ ನುಗ್ಗಿ ಹಣ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಅಲ್ಲದೇ ಕೈಗೆ ಸಿಕ್ಕ ಬೆಲೆಬಾಳುವ ವಸ್ತುಗಳನ್ನು ಕೂಡ ಹೊತ್ತೋಯ್ದಿದ್ದಾರೆ.

ಇದರಿಂದ ಮನೆಯ ಮಾಲೀಕರು ಕಂಗಲಾಗಿದ್ದು ಜೀವನಕ್ಕೆ ಆಧಾರ ಅಂತ ತೆಗೆದು ಇಟ್ಟಿದ್ದ ಎಲ್ಲ ವಸ್ತುಗಳನ್ನು ಕದೀಮರು ಕದ್ದು ಪರಾರಿಯಾಗಿದ್ದಾರೆ. ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗ್ರಾಮದ 6ಕ್ಕೂ ಹೆಚ್ಚು ಮನೆಗಳಿಗೆ ರಾತ್ರೋರಾತ್ರಿ ಕನ್ನ.. ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಹಣ ಕದ್ದು ಪರಾರಿ

https://newsfirstlive.com/wp-content/uploads/2024/02/CKD_6_HOUSE.jpg

Load More