Advertisment

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ರದ್ದು; ದೆಹಲಿಗೆ ಹೊರಟ ಖರ್ಗೆ, ರಾಹುಲ್ ಗಾಂಧಿ

author-image
admin
Updated On
ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ರದ್ದು; ದೆಹಲಿಗೆ ಹೊರಟ ಖರ್ಗೆ, ರಾಹುಲ್ ಗಾಂಧಿ
Advertisment
  • ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕ್ರಮ ರದ್ದು
  • ದೆಹಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ
  • ಬೆಳಗಾವಿಯಿಂದ ಹೊರಟ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ.

Advertisment

ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

publive-image

ಬೆಳಗಾವಿ ಸುವರ್ಣಸೌಧದಲ್ಲಿ ನಾಳೆ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಹಾಗೂ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

publive-image

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಗೆ ಆಗಮಿಸಿದ್ದರು.

Advertisment

ಇದನ್ನೂ ಓದಿ: BIG BREAKING: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ 

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ನಾಯಕರು ವಿಶೇಷ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment