/newsfirstlive-kannada/media/post_attachments/wp-content/uploads/2025/01/BGM-CONGRESS-SESSION-1.jpg)
ಬೆಳಗಾವಿ ನಗರ ಇವತ್ತು ಮತ್ತೊಂದು ಐತಿಹಾಸಿಕ ಕಾರ್ಯಕ್ರಮದ ಶತಮಾನೋತ್ಸವಕ್ಕೆ ಸಜ್ಜಾಗಿದೆ. ಇಡೀ ದೇಶದ ಕಾಂಗ್ರೆಸ್ ನಾಯಕರು ಬೆಳಗಾವಿಗೆ ಬರಲಿದ್ದಾರೆ. ಇಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆ, ಸುವರ್ಣ ಸೌಧದಲ್ಲಿ ಗಾಂಧಿ ಪ್ರತಿಮೆ ಲೋಕಾರ್ಪಣೆ ಹಾಗೂ ಬಹಿರಂಗ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ.
1924.. ಸ್ವಾತಂತ್ರ್ಯ ಸಂಗ್ರಾಮ ಚುರುಕು ಪಡೆದ ದಿನಗಳು. ಆ ದಿನಗಳಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ ಅಧಿವೇಶನ ನಡೆದು ನೂರು ವರ್ಷಗಳು ತುಂಬುತ್ತಿವೆ. ಹೀಗಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶತಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಜ್ಜಾಗಿದ್ದು, ಬೆಳಗಾವಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರ ಜೊತೆಗೆ ಕಾಂಗ್ರೆಸ್ ಬಾವುಟ, ಫೆಕ್ಸ್ ಗಳು ಎಲ್ಲೆಡೆ ರಾರಾಜಿಸುತ್ತಿವೆ.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿ ಸಜ್ಜು
ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಎದುರಿನಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಲಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತಲಿರಲಿದ್ದಾರೆ. 100ಕ್ಕೂ ಹೆಚ್ಚು ಸಂಸದರು, ಶಾಸಕರು ಹಾಗೂ ಎಐಸಿಸಿಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಸಿಪಿಇಡ್ ಮೈದಾನದಲ್ಲಿ ಅದ್ಧೂರಿ ವೇದಿಕೆ
/newsfirstlive-kannada/media/post_attachments/wp-content/uploads/2025/01/BGM-CONGRESS-SESSION-2.jpg)
ನಗರದ ಸಿಪಿಇಡ್ ಮೈದಾನದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮಕ್ಕೆ ಅದ್ಧೂರಿ ವೇದಿಕೆ ಸಿದ್ಧಗೊಂಡಿದೆ. ನಿನ್ನೆ ಬೆಳಗಾವಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮೊದಲಿಗೆ ಗಾಂಧೀಜಿ ಪ್ರತಿಮೆ ಉದ್ಘಾಟನೆ ಆಗಲಿರುವ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಬಳಿಕ ಸಿಪಿಇಡ್ ಮೈದಾನಕ್ಕೆ ಹೋಗಿ ಮುಖ್ಯ ವೇದಿಕೆಯನ್ನ ವೀಕ್ಷಿಸಿದ್ರು.
ಇದನ್ನೂ ಓದಿ:ಭಾರೀ ದಂಡ ತೆತ್ತ ಕಾಂತಾರ 2 ಚಿತ್ರತಂಡ.. ಶೂಟಿಂಗ್ ವೇಳೆ ಯಡವಟ್ಟು
ಇವತ್ತು ವೇದಿಕೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 1924ರ ಕಾಂಗ್ರೆಸ್ ಅಧಿವೇಶನದ ಮಹತ್ವದ ಸಂಗತಿಗಳ ಪುಸ್ತಕ ಅನಾವರಣ ಆಗಲಿದೆ. ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಮಹಾತ್ಮಾ ಗಾಂಧೀಜಿಯವರು ಮಾಡಿದ ಭಾಷಣ ಮತ್ತು ನಿರ್ಣಯಗಳಿಂದ ಕೂಡಿದ ಕನ್ನಡ ಹಾಗೂ ಆಂಗ್ಲ ಭಾಷೆಯ ಗಾಂಧಿ ಭಾರತ-ಮರುನಿರ್ಮಾಣ ಪುಸ್ತಗಳನ್ನ ಗಣ್ಯರು ಬಿಡುಗಡೆಗೊಳಿಸಲಿದ್ದಾರೆ.
/newsfirstlive-kannada/media/post_attachments/wp-content/uploads/2025/01/BGM-CONGRESS-SESSION.jpg)
ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ನಿರ್ಮಿಸಲಾದ ಮಹಾತ್ಮಾ ಗಾಂಧೀಜಿಯವರ ಪ್ರತಿಮೆ ನಿರ್ಮಾಣಕ್ಕೆ ಸುಮಾರು 20 ಟನ್ ತೂಕದ ಕಂಚು ಬಳಸಲಾಗಿದೆ. ಒಟ್ಟು 25 ಅಡಿ ಎತ್ತರದ ಪ್ರತಿಮೆ ಇದಾಗಿದೆ. ಒಟ್ಟು 4.83 ಕೋಟಿ ರೂ. ವೆಚ್ಚದಲ್ಲಿ ಪಂಚಲೋಹದಿಂದ ನಿರ್ಮಾಣಗೊಂಡಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿರುವ ಮೈಸೂರಿನ ಕಲಾವಿದ ಅರುಣ್ ಯೋಗಿರಾಜ ಗಾಂಧೀಜಿಯವರ ಈ ಪ್ರತಿಮೆ ನಿರ್ಮಿಸಿರೋದು ವಿಶೇಷ.
ಇದನ್ನೂ ಓದಿ:ಇಂದಿನಿಂದ 3 ದಿನ ಭರ್ಜರಿ ಮಳೆ; ರಾಜ್ಯ ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಖ್ಯ ಕಾರ್ಯಕ್ರಮದ ವೇದಿಕೆವರೆಗೂ ಬ್ಯಾನರ್ ಗಳ ಭರಾಟೆ ಜೋರಾಗಿದೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯರ ಕಟೌಟ್‌ಗಳು ಗಮನ ಸೆಳೆಯುತ್ತಿವೆ. ಇನ್ನೂ ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲೆ ಠಿಕಾಣಿ ಹೂಡಿರುವ ಡಿ.ಕೆ.ಶಿವಕುಮಾರ್ ಸಮಾವೇಶದ ಯಶಸ್ಸಿಗೆ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ. ಇವತ್ತು ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್ ರಣಕಹಳೆ ಮೊಳಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us