ಆಟೋ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ
ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬಳಿ ದುರಂತ
ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ
ವಿಜಯನಗರ: ಆಟೋ ಮತ್ತು ಲಾರಿ ನಡುವೆ ಭೀಕರ ಡಿಕ್ಕಿಯಾಗಿ 6 ಜನರು ಸಾವನ್ನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಆಟೋ ಮತ್ತು ಲಾರಿ ತೆರಳುತ್ತಿದ್ದವು. ಈ ವೇಳೆ ಎರಡರ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಪರಿಣಾಮ 6 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಪ್ರಯಾಣಿಕರ ಹೆಸರು, ವಿಳಾಸದ ಬಗ್ಗೆ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಲಾಗ್ತಿದೆ.
ಇನ್ನು ಘಟನಾ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಜಯನಗರ ಎಸ್ಪಿ ಶ್ರೀಹರಿಬಾಬು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ