newsfirstkannada.com

ನೇರ ನಿಷ್ಠುರ ರಾಜಕಾರಣಿ.. ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಇನ್ನಿಲ್ಲ

Share :

Published May 8, 2024 at 6:32pm

Update May 8, 2024 at 6:36pm

  ವಸಂತ ಬಂಗೇರರ ಪಾರ್ಥಿವ ಶರೀರವನ್ನು ನಾಳೆ ಬೆಳಿಗ್ಗೆ ಬೆಳ್ತಂಗಡಿಗೆ ರವಾನಿಸು ಸಾಧ್ಯತೆ

  ಕಾಂಗ್ರೆಸ್, JDS ಪಕ್ಷದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಮಾಜಿ ಶಾಸಕ ವಂಸತ ಬಂಗೇರಾ

  ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಶಾಸಕ ನಿಧನ

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ ಬಂಗೇರ ಅವರು ಚಕಿತ್ಸೆಗೆ ಫಲಿಸದೇ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. ವಸಂತ ಬಂಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇರ ನಿಷ್ಠೂರ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದರು. ಬೆಳ್ತಂಗಡಿಯಲ್ಲಿ ಐದು ಬಾರಿಯ ಶಾಸಕರಾಗಿದ್ದ ಕೆ.ವಸಂತ ಬಂಗೇರ ಇಂದು ವಿಧಿವಶರಾಗಿದ್ದಾರೆ.  ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ ಬಂಗೇರ ಇಂದು ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1946ರ ಜನವರಿ 15ರಂದು ವಸಂತ ಬಂಗೇರ ಬೆಳ್ತಂಗಡಿಯಲ್ಲಿ ಜನಿಸಿದ್ದರು. ವಂಸತ ಬಂಗೇರಾ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲುವು ಸಾಧಿಸಿ ದಾಖಲೆ ಬರೆದಿದ್ದರು.

ಇದನ್ನೂ ಓದಿ: ‘ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ 3-4 ಆತ್ಮಹತ್ಯೆ’- ಸ್ಫೋಟಕ ಮಾಹಿತಿ ಬಿಚ್ಚಿಟ್ಟ JDS ನಾಯಕ

ಕೆಲ ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಕಳೆದ ಹಲವು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ. ನಾಳೆ ಮುಂಜಾನೆ ವಸಂತ ಬಂಗೇರರ ಪಾರ್ಥಿವ ಶರೀರವನ್ನು ಬೆಳ್ತಂಗಡಿಗೆ ರವಾನಿಸು ಸಾಧ್ಯತೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆಗೆ ತಯಾರಿ ನಡೆಸಲಾಗುತ್ತಿದೆಯಂತೆ. 1983 ಮತ್ತು 1985ರಲ್ಲಿ ವಸಂತ ಬಂಗೇರ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತ ಸೋಲು ಅನುಭವಿಸಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ನಿಂತು ಗೆಲುವು ಸಾಧಿಸಿದ್ದರು. 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೇರ ನಿಷ್ಠುರ ರಾಜಕಾರಣಿ.. ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಇನ್ನಿಲ್ಲ

https://newsfirstlive.com/wp-content/uploads/2024/05/vasath.jpg

Load More