/newsfirstlive-kannada/media/post_attachments/wp-content/uploads/2025/01/KR-MARUKATTE.jpg)
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಹೀನಾಯ ಕೃತ್ಯ ಬೆಳಕಿಗೆ ಬಂದಿದೆ. ಮಹಿಳೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ, ರಾಬರಿ ನಡೆಸಿದ ಪ್ರಕರಣ ಬೆಂಗಳೂರು ಕೇಂದ್ರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಏನಿದು ಆರೋಪ ಪ್ರಕರಣ..?
ತಮಿಳುನಾಡಿನಿಂದ ಬೆಂಗಳೂರಿನ ಅಣ್ಣನ ಮನೆಗೆ ಮಹಿಳೆಯೊಬ್ಬರು ಬರುತ್ತಿದ್ದರು. ತಮಿಳುನಾಡಿನಿಂದ ಬಂದಿದ್ದ ಸಂತ್ರಸ್ತ ಮಹಿಳೆ ಕೆ.ಆರ್.ಮಾರುಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು. ಬಸ್ಸಿನ ಬಗ್ಗೆ ಸರಿಯಾದ ಮಾಹಿತಿ ತಿಳಿಯದ ಹಿನ್ನೆಲೆಯಲ್ಲಿ, ಆರೋಪಿಗಳ ಬಳಿ ವಿಚಾರಿಸಿದ್ದಾರೆ.
ಆಗ ಆರೋಪಿಗಳ ಕೆಟ್ಟ ಕಣ್ಣು ಮಹಿಳೆ ಮೆಲೆ ಬಿದ್ದಿದೆ. ಬಸ್​ ತೋರಿಸುತ್ತೇವೆಂದು ಗೋಡೌನ್​ ಸ್ಟ್ರೀಟ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ರಾತ್ರಿ 11.30ರ ಸುಮಾರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದಾರೆ. ನಂತರ ಆಕೆಯ ಬಳಿಯಿದ್ದ ಮೊಬೈಲ್, ಹಣ, ತಾಳಿ, ಚಿನ್ನ ಕದ್ದು ಪರಾರಿಯಾಗಿದ್ದಾರೆ. ಸಂತ್ರಸ್ತ ಮಹಿಳೆಯು ಬೆಂಗಳೂರು ಕೇಂದ್ರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾಳೆ. ಆರೋಪಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತಂಡವನ್ನು ರಚಿಸಲಾಗಿದೆ.
ಇದನ್ನೂ ಓದಿ: ಭಾರೀ ದಂಡ ತೆತ್ತ ಕಾಂತಾರ 2 ಚಿತ್ರತಂಡ.. ಶೂಟಿಂಗ್ ವೇಳೆ ಯಡವಟ್ಟು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us