newsfirstkannada.com

ಮಣಿಪುರ ಬೆನ್ನಲ್ಲೇ ಪಶ್ಚಿಮ ಬಂಗಾಳದ ಸರದಿ.. ಇಬ್ಬರು ಮಹಿಳೆಯರ ಅರೆ ನಗ್ನಗೊಳಿಸಿ ಥಳಿತ.. ದೀದಿ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವ..!

Share :

22-07-2023

  ಅಮಾನುಷ ಕೃತ್ಯ ಖಂಡಿಸಿದ ಬಿಜೆಪಿ, ದೀದಿ ವಿರುದ್ಧ ವಾಗ್ದಾಳಿ

  ಬಟ್ಟೆ ಹರಿದು ರಕ್ತ ಬರುವಂತೆ ಥಳಿಸಿದ ಮಹಿಳೆಯರು

  ಮಹಿಳೆಯರಿಂದ ಇಬ್ಬರು ಮಹಿಳೆಯರ ಮೇಲೆ ಇದೆಂಥ ದೌರ್ಜನ್ಯ?

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದೆ. ಮಾತ್ರವಲ್ಲ, ಇಡೀ ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕೋಲಾಹಲ ಸೃಷ್ಟಿಸಿದೆ.

ಕಳ್ಳತನ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದಾರೆ. ಮಾತ್ರವಲ್ಲ ಅವರನ್ನು ಅರೆ ನಗ್ನಗೊಳಿಸಿ ಮೆರವಣಿಗೆ ಮಾಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಒಂದಷ್ಟು ಮಹಿಳೆಯರು ಇಬ್ಬರು ಹೆಣ್ಮಕ್ಕಳಿಗೆ ಥಳಿಸುತ್ತಿರೋದನ್ನು ನಾವು ಗಮನಿಸಬಹುದಾಗಿದೆ. ಪಶ್ಚಿಮ ಬಂಗಾಳದ ಮಲ್ದಾದಲ್ಲಿ ಈ ಗಲಾಟೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆದರೂ ಪೊಲೀಸರು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ಪೊಲೀಸರು, ಮಲ್ದಾದ ಪುಕುಹತ್​​ ಎಂಬಲ್ಲಿ ಈ ಕೃತ್ಯ ನಡೆದಿದೆ. ನಾಲ್ಕು ದಿನಗಳ ಹಿಂದೆ ನಡೆದಿದೆ. ಇಬ್ಬರು ಮಹಿಳೆಯರು ಕಳ್ಳತನಕ್ಕೆ ಮುಂದಾಗಿದ್ದರು. ರೆಡ್​ಹ್ಯಾಂಡ್ ಆಗಿ ಸಿಕ್ಕಬಿದ್ದ ಹಿನ್ನೆಲೆಯಲ್ಲಿ ಥಳಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ತಪ್ಪು ಮಾಡಿದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಬಗ್ಗೆ ವಿಷಾದ ಇದೆ. ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಸಚಿವ ಠಾಕೂರ್ ಆಕ್ರೋಶ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಯಾಕೆ ಯಾರೂ ಮಾತನಾಡುತ್ತಿಲ್ಲ. ಪಂಚಾಯಿತ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಇರುವ ಜಾಗದಲ್ಲಿ ಬಾಂಬ್​​ಗಳು ಬಿದ್ದವು. ಯಾಕೆ ಮೈತ್ರಿ ಪಕ್ಷದ ನಾಯಕರು ಮೂಕರಾಗಿದ್ದಾರೆ? ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಇದೀಗ ಇಬ್ಬರು ಮಹಿಳೆಯರನ್ನು ಅರಬೆತ್ತಲೆ ಮಾಡಿ ಥಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ ಎಲ್ಲಿಗೆ ಹೋಗಿದ್ದಾರೆ. ಅಲ್ಲಿ ಅಪರಾಧಿಗಳಿಗೆ ರಕ್ಷಣೆ ನೀಡುವಂತಹ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಣಿಪುರ ಬೆನ್ನಲ್ಲೇ ಪಶ್ಚಿಮ ಬಂಗಾಳದ ಸರದಿ.. ಇಬ್ಬರು ಮಹಿಳೆಯರ ಅರೆ ನಗ್ನಗೊಳಿಸಿ ಥಳಿತ.. ದೀದಿ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವ..!

https://newsfirstlive.com/wp-content/uploads/2023/07/ANURAG.jpg

Load More