/newsfirstlive-kannada/media/post_attachments/wp-content/uploads/2023/07/bng-rain.jpg)
ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯ ವಿವಿಧ ಪ್ರದೇಶಗಳಲ್ಲಿ ಸಣ್ಣ ಮಳೆ ಆಗುತ್ತಿದ್ದು ಇದರ ಜೊತೆಗೆ ಚಳಿ ಕೂಡ ಮೈ ಆವರಿಸಿಕೊಳ್ಳುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಮುನ್ಸೂಚನೆ ಇದೆ.
ರಾಜ್ಯದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಸೇರಿದಂತೆ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಚಳಿಗಾಲಕ್ಕೂ ಮೊದಲೇ ಚಳಿ ಶುರುವಾಗಿದ್ದು ಎರಡೇರಡು ಬೆಡ್​ಶೀಟ್ ಹೊದ್ದುಕೊಂಡು ಮಲಗುವಂತೆ ಸದ್ಯದ ವಾತಾವರಣ ಮಾಡಿದೆ.
/newsfirstlive-kannada/media/post_attachments/wp-content/uploads/2024/10/RAIN-SCHOOL-1.jpg)
ಉತ್ತರ ಕನ್ನಡ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಹಗುರ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಪ್ರದೇಶಗಳಲ್ಲಿ ತುಂತುರು ಮಳೆ ಸಾಧಾರಣವಾಗಿ ಇರಲಿದೆ. ಇನ್ನು ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರೆಯಲಿದೆ.
ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ ಎಂದು ರಾಜ್ಯದ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us