/newsfirstlive-kannada/media/post_attachments/wp-content/uploads/2025/06/B-DAYANANDA-1.jpg)
ಚಿನ್ನಸ್ವಾಮಿಯಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಇಂದು ಮಹತ್ವದ ಸಭೆ ನಡೆಸಿತು. ಈ ಸಭೆಯಲ್ಲಿ ಸರ್ಕಾರ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಅದರಲ್ಲಿ ಪ್ರಮುಖವಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಎಸಿಪಿ ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರನ್ನ ಅಮಾನತು ಮಾಡಿ ಆದೇಶ ಮಾಡಿದೆ. ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್ಪೆಕ್ಟರ್, ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರಿಕೆಟ್ ಸ್ಟೇಡಿಯಂನ ಇನ್ಚಾರ್ಜ್ ಇವರನ್ನು ತತ್ ಕ್ಷಣದಿಂದ ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಪಿಐ, ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್, ಬೆಂಗಳೂರು ನಗರದ ಕಮಿಷನರ್ ಆಫ್ ಪೊಲೀಸ್ ಅವರನ್ನೂ ಅಮಾನತುಗೊಳಿಸಲು ಸರ್ಕಾರ ನಿರ್ಧಾರ ಮಾಡಿದೆ. ಆ ಮೂಲಕ ನಿನ್ನೆಯ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಪೊಲೀಸ್ ಇಲಾಖೆಯನ್ನೇ ಸರ್ಕಾರ ಹೊಣೆ ಮಾಡಿದಂತಿದೆ. ಇದು ಹಲವು ಚರ್ಚೆಗಳಿಗೆ ಕಾರಣವಾಗಿದೆ.
ಇದನ್ನೂ ಓದಿ: ಬೆಂಗಳೂರು ಪೊಲೀಸ್ ಕಮಿಷನರ್ ತಲೆದಂಡ -ಭದ್ರತಾ ಅಧಿಕಾರಿಗಳನ್ನೇ ಹೊಣೆ ಮಾಡಿದ ಸರ್ಕಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ