newsfirstkannada.com

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್​​.. ಈ ಬಗ್ಗೆ ಪೊಲೀಸ್ರು ಹೇಳಿದ್ದೇನು?

Share :

Published March 4, 2024 at 7:57pm

    ಇಡೀ ದೇಶಾದ್ಯಂತ ಭಾರೀ ಸದ್ದು ಮಾಡಿದ್ದ ಪಾಕ್​​ ಪರ ಘೋಷಣೆ ಕೇಸ್​​​

    ಕೇಸಲ್ಲಿ ಬೆಂಗಳೂರು ಪೊಲೀಸರಿಂದ ಮೂವರು ಆರೋಪಿಗಳು ಅರೆಸ್ಟ್​!

    ಈ ಬಗ್ಗೆ ಪೊಲೀಸರು ರಿಲೀಸ್​ ಮಾಡಿದ್ದ ಪತ್ರಿಕಾ ಹೇಳಿಕೆಯಲ್ಲಿ ಏನಿದೆ?

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಬಂಧಿತರನ್ನು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ರಿಲೀಸ್​ ಮಾಡಿರೋ ಪೊಲೀಸ್ರು, ಕಳೆದ ತಿಂಗಳು ಫೆಬ್ರವರಿ 27ನೇ ತಾರೀಕು ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಸಂದರ್ಭದಲ್ಲಿ ‘ಪಾಕಿಸ್ತಾನ್​ ಜಿಂದಾಬಾದ್​​’ ಎಂಬ ಘೋಷಣೆ ಕೂಗಿದ ಸಂಬಂಧ ಕೇಸ್​​ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್​ಎಸ್​​ಎಲ್​ ವರದಿ, ಸಾಂಧರ್ಬಿಕ ಸಾಕ್ಷ್ಯ ಆಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂವರನ್ನು ಬಂಧಿಸಿದ್ದೇವೆ. ಇವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಅಸಲಿಗೆ ಆಗಿದ್ದೇನು?

2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಪಾಕ್​ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್​​.. ಈ ಬಗ್ಗೆ ಪೊಲೀಸ್ರು ಹೇಳಿದ್ದೇನು?

https://newsfirstlive.com/wp-content/uploads/2024/02/Pak-Slogan.jpg

Load More