/newsfirstlive-kannada/media/post_attachments/wp-content/uploads/2024/12/Charith-Balappa-1.jpg)
ಬೆಂಗಳೂರು: ಕನ್ನಡದ ಮುದ್ದುಲಕ್ಷ್ಮಿ ಸೀರಿಯಲ್‌ನಲ್ಲಿ ನಟಿಸಿದ್ದ ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಪ್ರಕರಣ ದಾಖಲಿಸಿರುವ ಆರ್.ಆರ್ ನಗರ ಪೊಲೀಸರು ಚರಿತ್ ಬಾಳಪ್ಪ ಅವರನ್ನ ಬಂಧಿಸಿದ್ದಾರೆ.
ಇದನ್ನೂ ಓದಿ: BBK11: ಈ ವಾರ ಬಿಗ್ ಬಾಸ್ ಮನೆಯಿಂದ ಗೆಟ್ ಔಟ್ ಆಗೋದು ಯಾರು? ಇಂದೇ ಹೊಸ ಟ್ವಿಸ್ಟ್!
ಚರಿತ್ ಬಾಳಪ್ಪ ಕನ್ನಡದ ಮುದ್ದುಲಕ್ಷ್ಮಿ ಸೀರಿಯಲ್‌ನಲ್ಲಿ ಅಷ್ಟೇ ಅಲ್ಲ ತೆಲುಗು ಕಿರುತೆರೆಯ ಅನೇಕ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ ಈ ನಟನ ಮೇಲೆ ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಕೇಳಿ ಬಂದಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ, ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡದ ಆರೋಪ ಕೇಳಿ ಬಂದಿದೆ.
/newsfirstlive-kannada/media/post_attachments/wp-content/uploads/2024/12/Charith-Balappa-3.jpg)
ನಟ ಚರಿತ್ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿದ್ದರಂತೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದರಂತೆ. ಈ ಆರೋಪದ ಹಿನ್ನೆಲೆಯಲ್ಲಿ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಹಲ್ಲೆ ಆರೋಪವನ್ನ ಯುವತಿ ಮಾಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಆರ್.ಆರ್ ನಗರ ಪೊಲೀಸರು ಆರೋಪಿ ಚರಿತ್ ಬಾಳಪ್ಪ ಅವರನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ.
/newsfirstlive-kannada/media/post_attachments/wp-content/uploads/2024/12/Charith-Balappa-2.jpg)
ಚರಿತ್ ಪತ್ನಿಯಿಂದಲೂ ದೂರು!
ನಟ ಚರಿತ್ ಬಾಳಪ್ಪ ಈಗಾಗಲೇ ಪತ್ನಿಯಿಂದ ಡಿವೋರ್ಸ್ ಪಡೆದಿದ್ದಾರೆ. ಈ ಹಿಂದೆ ಚರಿತ್ ವಿರುದ್ಧ ಪತ್ನಿ ದೂರು ನೀಡಿದ್ದರು. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಬೆದರಿಕೆ ಹಾಕಿದ್ದಾರೆಂದು ದೂರು ನೀಡಿದ್ದು, ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ NCR ದಾಖಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us