/newsfirstlive-kannada/media/post_attachments/wp-content/uploads/2023/09/NewBornBaby.jpg)
ಸಿಲಿಕಾನ್ ಸಿಟಿಯಲ್ಲಿ ಹಸುಗೂಸುಗಳ ಮಾರಾಟ ದಂಧೆಯೊಂದು ಪತ್ತೆಯಾಗಿದೆ. ಹಾಲುಗಲ್ಲದ ಕಂದಮ್ಮಗಳನ್ನ ಲಕ್ಷ ಲಕ್ಷ ಹಣಕ್ಕೆ ಮಾರಾಟ ಮಾಡುತ್ತಿದ್ದ ಗ್ಯಾಂಗ್​​ವೊಂದನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಮಗು ಮಾರಾಟ ಮಾಡುವ ಗ್ಯಾಂಗ್​ವೊಂದು ಸಿಸಿಬಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದೆ. ಸದ್ಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ, ಶರಣ್ಯ ಎಂಬುವರ ಹಸುಗೂಸನ್ನು ಮಾರಾಟ ಮಾಡುತ್ತಿದ್ದು, ಈ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮಕ್ಕಳಾಗದ ದಂಪತಿಗಳಿಗೆ ಈ ಗ್ಯಾಂಗ್​​ ಹಸುಗೂಸುಗಳ ಮಾರಾಟ ಮಾಡುತ್ತಿದ್ದರು. 15 ರಿಂದ 20 ದಿನದ ಹಸುಗೂಸನ್ನ ಮಾರಾಟ ಮಾಡ್ತಿದ್ದರು. ಕಾರಿನಲ್ಲಿ ಮಗು ಮಾರಾಟಕ್ಕೆ ಬಂದ ವೇಳೆ ಇವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಇವರ ಬಳಿಯಿದ್ದ 20 ದಿನದ ಗಂಡು ಮಗುವನ್ನು ಪೊಲಿಸರು ರಕ್ಷಣೆ ಮಾಡಿದ್ದಾರೆ.
ಬಂಧಿತರು ಇನ್ನೂ ಹೆಚ್ಚಿನ ಮಕ್ಕಳನ್ನ ಮಾರಾಟ ಮಾಡಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us