/newsfirstlive-kannada/media/post_attachments/wp-content/uploads/2024/09/RAIN-2.jpg)
ಬೆಂಗಳೂರು: ಬೆಳ್ಳಂಬೆಳಗ್ಗೆಯಿಂದಲೇ ಸಿಲಿಕಾನ್ ಸಿಟಿಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮುಂಜಾನೆಯಿಂದ ಸುರಿದ ಮಳೆಗೆ ಬೆಂಗಳೂರಿನ ಚಿತ್ರಣವೇ ಬದಲಾಗಿದೆ. ಹಲವೆಡೆ ಮರಗಳು ಧರೆಗುಳಿದಿದ್ದು, ಮತ್ತೆ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿವೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಸಾಲು ಸಾಲು ಅವಾಂತರಗಳು
ಮಳೆಯಿಂದಾಗಿ HMT ಲೇಔಟ್​​ನಲ್ಲಿ ಬೃಹದಾಕಾರದ ಮರ ಧರೆಗುರುಳಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಮರ ನೆಲಕ್ಕುರುಳಿದ್ದು, ಮರ ಬಿದ್ದ ಪರಿಣಾಮ ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. 3 ತಿಂಗಳ ಹಿಂದೆ ಮರ ತೆರವು ಮಾಡುವಂತೆ ಬಿಬಿಎಂಪಿಗೆ ದೂರು ನೀಡಿದ್ದರು ಕ್ಯಾರೆ ಎಂದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
/newsfirstlive-kannada/media/post_attachments/wp-content/uploads/2024/10/Tree-fall-bengaluru.jpg)
ಅರ್ಧಗಂಟೆಯಿಂದಳು ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಬರೋಬ್ಬರಿ 2 ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಆಗಿದೆ. ಮಳೆಯ ಅಬ್ಬರದಿಂದ ಸಿಟಿ ಮಂದಿ ತತ್ತರಿಸಿ ಹೋಗಿದ್ದಾರೆ. ಆಫೀಸ್ ಹೋಗುವವರು, ಶಾಲೆಗೆ ಹೋಗುವವರು ಪರದಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us