newsfirstkannada.com

‘ಬೆಂಗಳೂರು ನಮ್ಮದು.. ಕನಕಪುರ ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ’- ಡಿಸಿಎಂ ಡಿ.ಕೆ ಶಿವಕುಮಾರ್

Share :

24-10-2023

    ನಮ್ಮದು ರಾಮನಗರ ಜಿಲ್ಲೆಯಲ್ಲ, ಬೆಂಗಳೂರು ಜಿಲ್ಲೆಯವರು ನಾವು

    ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಟಾಂಗ್ ಕೊಟ್ಟ ಡಿ.ಕೆ ಶಿವಕುಮಾರ್

    ಯಾವುದೇ ಕಾರಣಕ್ಕೂ ಬೆಂಗಳೂರಿಗರಿಗೆ ಭೂಮಿ ಮಾರಾಟ ಮಾಡಬೇಡಿ

ರಾಮನಗರ: ನಮ್ಮದು ರಾಮನಗರ ಜಿಲ್ಲೆಯಲ್ಲ. ಬೆಂಗಳೂರು ಜಿಲ್ಲೆಯವರು ನಾವು. ಯಾರೋ ಹೆಸರು ಮಾಡಲು ಇದಕ್ಕೆ ರಾಮನಗರ ಎಂದು ಹೆಸರಿಟ್ಟಿದ್ದಾರೆ. ನನ್ನ ಮೇಲೆ ನಂಬಿಕೆ ಇಡಿ. ಮುಂದೆ ಬೆಂಗಳೂರು ಜಿಲ್ಲೆಗೆ ಕನಕಪುರವನ್ನು ಸೇರಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಕನಕಪುರ ತಾಲ್ಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ವೀರಭದ್ರೇಶ್ವರ ದೇವಾಲಯದ ಭೂಮಿ ಪೂಜೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ನೀವು ಬೆಂಗಳೂರು ಜಿಲ್ಲೆಯವರು. ರಾಮನಗರ ಜಿಲ್ಲೆಯವರಲ್ಲ ಎಂಬುದು ನಿಮ್ಮ ತಲೆಯಲ್ಲಿ ಇರಲಿ. ಯಾರೋ ತಮ್ಮ ಹೆಸರು ಬರಲಿ ಅಂತ ಇದನ್ನು ರಾಮನಗರ ಮಾಡಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಟಾಂಗ್ ಕೊಟ್ಟರು.

ಇನ್ಮುಂದೆ ರಾಮನಗರ ಜಿಲ್ಲೆ ಇರುವುದಿಲ್ಲ. ಕನಕಪುರ ಬೆಂಗಳೂರಿಗೆ ಸೇರುತ್ತದೆ. ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತದೆ. ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಆದ ಕಾರಣ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ. ಕನಕಪುರ ಜಿಲ್ಲಾ ಕೇಂದ್ರ ಮಾಡುವ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡಲು ಹೋಗುವುದಿಲ್ಲ. ಉಪಮುಖ್ಯಮಂತ್ರಿ ಸ್ಥಾನ ಬೆಂಗಳೂರಿಗೆ ಸೀಮಿತ. ಇದು ನನ್ನ ಊರಿನ ಕೆಲಸ. ನಮ್ಮ ಕ್ಷೇತ್ರದ ಯಾವುದೇ ಕೆಲಸ ಇದ್ದರು ನಾವು ಹಿಂಜರಿಯುವುದಿಲ್ಲ. ಆದ ಕಾರಣ ಮೈಸೂರಿನಲ್ಲಿ ಪ್ರಮುಖ ಕೆಲಸವಿದ್ದರೂ ನಾನು ನಮ್ಮ ಕ್ಷೇತ್ರಕ್ಕೆ ಬಂದೆ ಎಂದು ಹೇಳಿದರು.

ಈ ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ. ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ. ನಿಮ್ಮ ಆಸ್ತಿ ಮೌಲ್ಯಗಳನ್ನ ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ನಾವು ಕನಕಪುರದವರು ರಾಮನಗರ ಜಿಲ್ಲೆಯವರಲ್ಲ. ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

‘ಬೆಂಗಳೂರು ನಮ್ಮದು.. ಕನಕಪುರ ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ’- ಡಿಸಿಎಂ ಡಿ.ಕೆ ಶಿವಕುಮಾರ್

https://newsfirstlive.com/wp-content/uploads/2023/10/Dk-Shivakumar-Ramnagar.jpg

Load More