/newsfirstlive-kannada/media/post_attachments/wp-content/uploads/2024/07/Kia-Car.jpg)
ಬೆಂಗಳೂರು: ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ರಾತ್ರಿ 10.20ರ ಸುಮಾರಿಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಚಾಲಕ ಒಬ್ಬನೇ ಕಿಯಾ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರಿನಿಂದ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
/newsfirstlive-kannada/media/post_attachments/wp-content/uploads/2024/07/car-Fire.jpg)
ಇದನ್ನೂ ಓದಿ: ಮಳೆ, ಪ್ರವಾಹ, ಸಂಕಷ್ಟ.. ಶಾಲಾ-ಕಾಲೇಜುಗಳಿಗೆ ರಜೆ.. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕಾರು ಹೊತ್ತಿ ಉರಿಯುತ್ತಿರೋದನ್ನು ಕಂಡು ಸ್ಥಳೀಯರು ಆಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us