/newsfirstlive-kannada/media/post_attachments/wp-content/uploads/2025/05/BNG_RAINS_2.jpg)
ಬೆಂಗಳೂರಲ್ಲಿ ಸುರಿದಿರುವ ಧಾರಾಕಾರ ಮಳೆ ಕೆಲವು ಏರಿಯಾಗಳ ನಿವಾಸಿಗಳು ಬೋಟ್‌ಗಳಲ್ಲಿ ಸಂಚರಿಸುವಂತೆ ಮಾಡಿದೆ. ಮನೆಗಳಿಗೆ ನೀರು ನುಗ್ಗಿದ್ರೆ ಸಿಲಿಕಾನ್ ಸಿಟಿ ಜನ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ. ಕೆಲವು ಬಡಾವಣೆಗಳಲ್ಲಿ ಜನ ಜೀವನ ಅಸ್ತವ್ಯಸ್ಥವಾಗಿದ್ರೆ, ರಸ್ತೆಗಳೆಲ್ಲಾ ಇನ್ನೂ ಮುಳುಗಡೆಯಾಗಿವೆ.
ನಿನ್ನೆ ರಾತ್ರಿ ನಗರದ ಹಲವೆಡೆ ಭಾರೀ ಮಳೆಯಾಗಿದೆ. ವರ್ಷಧಾರೆಯ ಈ ಆತಂಕದ ಮಧ್ಯೆ ರಾಜ್ಯ ಹವಾಮಾನ ಇಲಾಖೆ ಮುಂದಿನ 4 ದಿನಗಳ ಕಾಲ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ.
/newsfirstlive-kannada/media/post_attachments/wp-content/uploads/2025/05/bng-rain2.jpg)
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮೇ 22ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಇನ್ನೂ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ನಿನ್ನೆಯಂತೆ ಬೆಂಗಳೂರಲ್ಲಿ ಇಂದೂ ಕೂಡ ಧಾರಾಕಾರ ಮಳೆಯಾಗಲಿದೆ. ಮೇ 21ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಇಂದು ಎಲ್ಲೆಲ್ಲಿ ಮಳೆ?
ಪ್ರಮುಖವಾಗಿ ಇವತ್ತು ಬೆಂಗಳೂರಿನ ಯಲಹಂಕ, ದಾಸರಹಳ್ಳಿ, ಆರ್.ಆರ್ ನಗರ, ಬೊಮ್ಮನಹಳ್ಳಿ, ಮಹದೇವಪುರ ಭಾಗದಲ್ಲಿ ಮಳೆ ಸುರಿಯುವ ಎಚ್ಚರಿಕೆ ಇದೆ.
ಇದನ್ನೂ ಓದಿ: ಮುದ್ದು.. ಮುದ್ದು ರಾಕ್ಷಸಿ ಅಂತ ಪತ್ನಿ ವಿಜಯಲಕ್ಷ್ಮೀ ಜೊತೆಗೆ ದರ್ಶನ್​ ಭರ್ಜರಿ ಡಾನ್ಸ್!
ಸಿಲಿಕಾನ್ ಸಿಟಿ ನಿನ್ನೆ ಸುರಿದ ಒಂದೇ ಮಳೆಗೆ ತತ್ತರಿಸಿ ಹೋಗಿದೆ. ಮಳೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ, ಗ್ರೇಟರ್ ಬೆಂಗಳೂರು ಕಂಪ್ಲೀಟ್ ಫೇಲ್ ಆಗಿದೆ ಎಂದು ಸಂತ್ರಸ್ತರು ಹೇಳುತ್ತಿದ್ದಾರೆ. ಮುಂದಿನ ಮೂರು ದಿನ ಹೀಗೆ ಮಳೆಯಾದ್ರೆ ಬೆಂಗಳೂರಿನ ಸ್ಥಿತಿ ಏನು ಅನ್ನೋದು ನಿವಾಸಿಗಳ ಚಿಂತೆ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us