/newsfirstlive-kannada/media/post_attachments/wp-content/uploads/2025/04/RAIN-IN-STATE-MAIN.jpg)
ಬೆಂಗಳೂರು: ರಾಜ್ಯದಾದ್ಯಂತ ಪೂರ್ವ ಮುಂಗಾರು ಮಳೆ ತೀವ್ರಗೊಂಡಿದ್ದು ಮೇ 24ರವರೆ ಅಂದರೆ ಇನ್ನು 4 ದಿನ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಭಾರೀ ಮಳೆ ಸುರಿಯುತ್ತಿದೆ. ಮುಂದಿನ 4 ದಿನಗಳವರೆಗೆ ಜೋರು ಮಳೆಯಾಗುವ ಎಲ್ಲ ಲಕ್ಷಣಗಳು ಇವೆ. ರಾಜ್ಯದ ವಿವಿಧ ಭಾಗಗಳಲ್ಲಿ ಜೋರಾದ ಮಳೆ ದಾಖಲು ಆಗಿದೆ. ಬೆಂಗಳೂರು ಸೇರಿ ಹಲವಾರು ಪ್ರದೇಶಗಳಲ್ಲಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ.
ಇದನ್ನೂ ಓದಿ: ಬೆಂಗಳೂರಲ್ಲಿ ಮಳೆಯಿಂದ ಬೇಸರ; BBMPಗೆ 50 ಲಕ್ಷ ರೂಪಾಯಿ ನೋಟಿಸ್ ಕಳುಹಿಸಿದ ಮಹಿಳೆ
/newsfirstlive-kannada/media/post_attachments/wp-content/uploads/2025/05/Bangalore-sai-layout.jpg)
ಕರ್ನಾಟಕ ಕರಾವಳಿ ಬಳಿ ವಾಯು ಭಾರ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಒಳನಾಡು ಪ್ರದೇಶದಲ್ಲಿ ಟ್ರಫ್ ಆಕ್ಟಿವ್ ಆಗಲಿದೆ. ಬೆಂಗಳೂರಿನಲ್ಲಿ 23ನೇ ತಾರೀಖನವರೆಗೆ ಜೋರು ಮಳೆ ಸಾಧ್ಯತೆ ಇದೆ. ಈಗಾಗಲೇ ಎರಡು ದಿನ ಸುರಿದ ಮಳೆಗೆ ಸಿಲಿಕಾನ್ ಸಿಟಿ ಕೆರೆಯಂತೆ ಆಗಿದೆ. ಹೀಗಾಗಿ ಇಂದು ಕೂಡ ಬೆಂಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ವರುಣನ ಆರ್ಭಟ ಜೋರಾಗಿ ಇರಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ್ಯಾಂತ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us