/newsfirstlive-kannada/media/post_attachments/wp-content/uploads/2024/11/Bangalore-lover.jpg)
ಬೆಂಗಳೂರು ನಗರದಲ್ಲಿ ಮತ್ತೊಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಪ್ರಿಯಕರನ ಕೈಯಿಂದ ಪ್ರೇಯಸಿಯ ಬರ್ಬರ ಹತ್ಯೆಯಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ದುರಂತ ಅಂತ್ಯವಾಗಿದೆ.
ಇಂದಿರಾನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಈ ಭಯಾನಕ ಕೃತ್ಯ ನಡೆದಿದೆ. ಮೃತ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆ ಮಾಯಾ ಹಾಗೂ ಆಕೆಯ ಪ್ರಿಯಕರ ಸರ್ವೀಸ್ ಅಪಾರ್ಟ್‌ಮೆಂಟ್‌ಗೆ ಬಂದು ರೂಂ ಬುಕ್ ಮಾಡಿದ್ದರು. ನಿನ್ನೆ ಸಂಜೆ ಮಾಯಾ ಜೀವ ತೆಗೆದು ಆರೋಪಿ ಅಲ್ಲಿಂದ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: Video; 15 ಜನರಿಗೆ ತಿವಿದು ಗಾಯಗೊಳಿಸಿದ ಭಯಂಕರ ಗೂಳಿ! ಸೆರೆಹಿಡಿಯಲು ಬೇಕಾಯ್ತು ಬರೋಬ್ಬರಿ 3 ಗಂಟೆ!
ಸರ್ವೀಸ್ ಅಪಾರ್ಟ್‌ಮೆಂಟ್‌ನ ರೂಮ್ ಒಳಗ್ಗೆ ಇಬ್ಬರೇ ಹೋಗಿರುವುದರಿಂದ ಪ್ರಿಯಕರನಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಇಂದಿರಾ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಸಂಗ್ರಹ ಮಾಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us