ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣ!
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್
ಕೋರ್ಟ್ ಆದೇಶದಂತೆ ಬೆಂಗಳೂರು ಪೊಲೀಸರಿಂದ ಎಫ್‌ಐಆರ್ ದಾಖಲು
ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಕೇಸ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶದ ಮೇರೆಗೆ ಎಫ್‌ಐಆರ್ ಮಾಡಲಾಗಿದೆ. IPC 384, 120 ಬಿ, 34ನ ಅಡಿಯಲ್ಲಿ ಎಫ್‌ಐಆರ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮಕ್ಕೆ ಕೋರಿ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ ಅಯ್ಯರ್ ಎಂಬುವರು ಕೋರ್ಟ್ಗೆ ದೂರು ನೀಡಿದ್ರು. ದೂರಿನ ವಿಚಾರಣೆ ನಡೆಸಿದ ಕೋರ್ಟ್ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿತ್ತು.
ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಸೂಚನೆ!
ಕೋರ್ಟ್ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಸೂಚಿಸಿತ್ತು. ಈ ಕೂಡಲೇ ಎಚ್ಚೆತ್ತ ತಿಲಕ್ ನಗರ ಪೊಲೀಸರು ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಮಾಡಿದ್ದಾರೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅಷ್ಟೇ ಅಲ್ಲ ಅರ್ಜಿದಾರರ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದು, ಕೇಸ್ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.
ಚುನಾವಣಾ ಬಾಂಡ್ ಎಂದರೇನು?
2018ರಲ್ಲಿ ರಾಜಕೀಯ ಪಕ್ಷಗಳಿಗೆ ಹರಿದು ಬರುತ್ತಿರೋ ಕಪ್ಪು ಹಣವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಚುನಾವಣಾ ಬಾಂಡ್ ಅನ್ನು ಜಾರಿಗೆ ತಂದಿತ್ತು. ದೇಣಿಗೆ ಪ್ರಕ್ರಿಯೆ ಪಾರದರ್ಶಕವಾಗಿ ಇರಲಿ ಎಂಬ ಕಾರಣಕ್ಕೆ ಇದು ಜಾರಿ ಮಾಡಲಾಗಿತ್ತು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ