/newsfirstlive-kannada/media/post_attachments/wp-content/uploads/2025/05/sonu-nigam6.jpg)
ಖ್ಯಾತ ಗಾಯಕ ಸೋನು ನಿಗಮ್ ಕನ್ನಡ ಹಾಡುಗಳ ಬಗ್ಗೆ, ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತಾಡುತ್ತಲೇ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದು ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಅಲ್ಲದೇ ಸೋನು ನಿಗಮ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವಲಹಳ್ಳಿ ಪೊಲೀಸರು ಸೋನು ನಿಗಮ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ:ಸೋನು ನಿಗಮ್‌ಗೆ FIR ಸಂಕಷ್ಟ.. ಬಂಧನಕ್ಕೆ ಇಂದು ಕರವೇ ನಾರಾಯಣ ಗೌಡ ಬೃಹತ್ ಹೋರಾಟ!
ಇಂದು ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ ಒಂದು ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಕಾರ್ಯಕ್ರಮ ಆಯೋಜಕರಿಗೂ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ಯಾವ ಕಂಟ್ರಾಕ್ಟ್ ಮೇಲೆ ಕಾರ್ಯಕ್ರಮಕ್ಕೆ ಬಂದಿದ್ರು. ಎಷ್ಟು ಗಂಟೆಗಳ ಕಾರ್ಯಕ್ರಮ, ಬೇರೆ ಯಾರು ಅವರ ಜೊತೆಯಲ್ಲಿ ಇದ್ದರು. ಸೋನು ನಿಗಮ್ ಆಗಮಿಸಿದ್ದ ಬಗ್ಗೆ ಖಚಿತತೆ ಪಡಿಸಿಕೊಳ್ಳಲು ನೋಟಿಸ್ ನೀಡಲು ಮುಂದಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ