/newsfirstlive-kannada/media/post_attachments/wp-content/uploads/2023/11/Prathima-4.jpg)
ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಸಂಭದಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರಣ್ ಎಂಬಾತನನ್ನು ಪೊಲೀಸರು ವಶಕ್ಕೆ ​ಪಡೆದಿದ್ದು, ಈತನೇ ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿದ್ದಾನೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.
ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅದರಲ್ಲಿ ಕಿರಣ್​ ಎಂಬಾತ ಪ್ರತಿಮಾ ಅವರ ಹಳೆ ಡ್ರೈವರ್​ ಆಗಿದ್ದನು ಎಂಬುದು ತಿಳಿದುಬಂದಿದೆ.
ಸದ್ಯ ಹೊರಬಿದ್ದ ಮಾಹಿತಿ ಪ್ರಕಾರ, ವಿಚಾರಣೆ ನಡೆಸಿದ್ದ ವೇಳೆ ಕೊಲೆ ಮಾಡಿದ್ದು ಒಬ್ಬನೇ ಎಂಬುದು ಬಯಲಿಗೆ ಬಂದಿದೆ. ಕಿರಣ್ ಎಂಬಾತನೇ ಈ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿದ್ದಾನೆ ಎನ್ನಲಾಗುತ್ತಿದೆ.
ಪ್ರತಿಮಾ ಮನೆಗೆ ಬಂದು ಕೊಲೆ ಮಾಡಿರುವುದಾಗಿ ಮಾಹಿತಿ ಹೊರಬಿದ್ದಿದೆ. ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us