ಬೆಂಗಳೂರಲ್ಲಿ ಮತ್ತೆ ಮಳೆ ಬರ್ತಿರೋದಕ್ಕೆ ಕಾರಣ ಏನು?
ಬೆಂಗಳೂರಲ್ಲಿ ಟ್ರಾಫಿಕ್ ಜಾಮ್, ವಾಹನ ಸವಾರರು ಪರದಾಟ
13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಬೆಂಗಳೂರು ಜನರಿಗೆ ಬೆಳ್ಳಂಬೆಳಗ್ಗೆ ಮಳೆರಾಯ ಬಿಗ್ ಶಾಕ್ ನೀಡಿದ್ದಾನೆ. ಮುಂಜಾನೆ ನಾಲ್ಕು ಗಂಟೆಯಿಂದ ಜಿಟಿಜಿಟಿ ಮಳೆ ಶುರುವಾಗಿದ್ದು, ದಿನನಿತ್ಯದ ಚಟುವಟಿಕೆಗಳಿಗೆ ಕಿರಿಕಿರಿ ಮಾಡ್ತಿದ್ದಾನೆ.
ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಲು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಕೆಲಸಕ್ಕೆ ಹೋಗೋರು ಪರದಾಡುವಂತೆ ಆಗಿದೆ. ನಗರದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಬೆಳಗ್ಗೆಯೇ ಟ್ರಾಫಿಕ್ ಬಿಸಿ ತಟ್ಟಿದೆ.
ಇದನ್ನೂ ಓದಿ:ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ.. ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ
ಅಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ವೈಪರಿತ್ಯ ಆಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಮೇಲಿನ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 17ರಂದು ಆರೆಂಜ್ ಅಲರ್ಟ್ ಘೋಷಣೆ ಇದೆ.
ಇದನ್ನೂ ಓದಿ:ರಣರಣ ಮರುಭೂಮಿಯಲ್ಲಿ ರಣಭೀಕರ ಮಳೆ; ಸಹರಾದಲ್ಲಿ ಪ್ರವಾಹ ಸೃಷ್ಟಿಸಿದ ವರ್ಷಧಾರೆ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ