newsfirstkannada.com

ಮಳೆ.. ಮಳೆ.. ಮಳೆ.. ಬೆಂಗಳೂರಿಗರೇ ಎಚ್ಚರ! ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್‌ ಘೋಷಣೆ

Share :

Published May 12, 2024 at 10:52am

    ಬೆಂಗಳೂರಲ್ಲಿ ಇನ್ನೂ ಎಷ್ಟು ದಿನ ಗುಡುಗು, ಮಿಂಚಿನ ಮಳೆಯ ಅಬ್ಬರ

    ಬೆಂಗಳೂರು ನಗರಕ್ಕೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

    ಮೇ ತಿಂಗಳಲ್ಲಿ ರಾಜ್ಯಾದ್ಯಂತ ಭರ್ಜರಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ದಾಖಲೆಯ ಬಿಸಿಲಿಗೆ ಬೇಸತ್ತು ಹೋಗಿದ್ದ ಸಿಲಿಕಾನ್ ಸಿಟಿ ಈಗ ಕೂಲ್ ಸಿಟಿಯಾಗಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನ ವಾತಾವರಣ ತಂಪಾಗಿದ್ದು, ಬಾರೋ ಬಾರೋ ಮಳೆರಾಯ ಅಂತಿದ್ದವರಿಗೆ ವರುಣ ಕೃಪೆ ತೋರಿದ್ದಾನೆ. ಇವತ್ತೂ ಕೂಡ ಬೆಂಗಳೂರಿನ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಭಾರತೀಯ ಹವಾಮಾನ ಇಲಾಖೆ ಬೆಂಗಳೂರಲ್ಲಿ ಇನ್ನೂ ಕೆಲವು ದಿನ ಸಾಧಾರಣ ಹಾಗೂ ಮಧ್ಯಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ. ಮೇ 13ರವರೆಗೂ ಬೆಂಗಳೂರು ನಗರಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ಹೈಕೋರ್ಟ್ ವಕೀಲೆ ಚೈತ್ರಾ ಸಾವು.. ಡೆತ್​ ನೋಟ್​ನಲ್ಲಿ ಗಂಡನ ಬಗ್ಗೆ ಏನೇನಿದೆ? 

ಹಿರಿಯ ಹವಾಮಾನ ವಿಜ್ಞಾನಿ ಸಿ.ಎಸ್ ಪಾಟೀಲ್ ಅವರು ಕರ್ನಾಟಕದಲ್ಲಿ ಒಂದು ವಾರಗಳ ಕಾಲ ಜೋರಾದ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಗಾಳಿಯ ವೇಗೆ ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿರಲಿದೆ. ಬೆಂಗಳೂರಲ್ಲಿ ಮುಂದಿನ ವಾರವೂ ಸಾಧಾರಣ ಮಳೆ ಮುಂದುವರಿಯಲಿದ್ದು, ವಾತಾವರಣದಲ್ಲಿ ಉಷ್ಣಾಂಶ ಕುಸಿಯಲಿದೆ ಎಂದಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಬೆಂಗಳೂರಲ್ಲಿ ಮಳೆ ಸಂಪೂರ್ಣವಾಗಿ ಮಾಯವಾಗಿತ್ತು. ಆದರೆ ಮೇ ತಿಂಗಳಲ್ಲಿ ರಾಜ್ಯದಲ್ಲಿ 7 ಸೆಂಟಿಮೀಟರ್‌ನಷ್ಟು ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿಯೇ ಬೆಂಗಳೂರಿಗೆ ಝೆಲ್ಲೋ ಅಲರ್ಟ್‌ ನೀಡಲಾಗಿದೆ. ಇಂದಿನಿಂದ ಒಂದು ವಾರಗಳ ಕಾಲ ಸಂಜೆ ವೇಳೆ ಮನೆಯಿಂದ ಹೊರಗೆ ಹೋಗುವವರು ಸ್ವಲ್ಪ ಎಚ್ಚರದಿಂದ ಇರಬೇಕು. ಮಳೆಯಿಂದ ರಕ್ಷಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಂಡು ಮನೆಯಿಂದ ಹೊರಗೆ ಹೋದರೆ ಒಳ್ಳೆಯದು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಳೆ.. ಮಳೆ.. ಮಳೆ.. ಬೆಂಗಳೂರಿಗರೇ ಎಚ್ಚರ! ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್‌ ಘೋಷಣೆ

https://newsfirstlive.com/wp-content/uploads/2024/05/Bangalore-Rains-1.jpg

Load More