ವಾಹನಗಳಿಗೆ ಸುರಕ್ಷಾ ನೋಂದಣಿ ಫಲಕ ಯೋಜನೆಯಲ್ಲಿ ಅಕ್ರಮ
ವಿವಿ ವಿದ್ಯಾರ್ಥಿಗಳ ಒಕ್ಕೂಟದಿಂದ ಕೇಂದ್ರದ ಯೋಜನೆಗೆ ವಿರೋಧ
ರಾಜ್ಯದ 20 ಸಾವಿರ ಕುಟುಂಬಗಳು ಬೀದಿಗೆ ಬರಲಿವೆಂದು ಆತಂಕ
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿ ಮುನ್ನವೇ ಅಕ್ರಮ ನಡೆದಿದೆ ಎಂದು ಆರೋಪಿಸಿ ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಒತ್ತಾಯಿಸಿದೆ.
ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಲೋಕೇಶ್ ರಾಮ್, ಕೇಂದ್ರ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಈ ಯೋಜನೆಯನ್ನು ಲಂಚದ ಆಸೆಗಾಗಿ ಹಾದಿ ತಪ್ಪಿಸಲು ಹುನ್ನಾರ ನಡೆದಿದೆ. ಯೋಜನೆಯಲ್ಲಿ ಅಕ್ರಮ ನಡೆದಿದೆಂದು ಆರೋಪಿಸಿರುವ ಅವರು ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶಿಸಬೇಕು. ಈ ಸಂಬಂಧ ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀಡಿರುವ ದೂರಿನ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
20,000ಕ್ಕೂ ಹೆಚ್ಚು ಕುಟುಂಬಗಳು ಬೀದಿ ಪಾಲಾಗುವ ಆತಂಕ
ವಾಹನ ಕಳ್ಳತನ ತಡೆಯುವುದು, ಕದ್ದ ವಾಹನಗಳನ್ನು ಬಳಸಿ ನಡೆಯುವ ಕೃತ್ಯಗಳನ್ನು ಹಾಗೂ ಕಾನೂನು ಉಲ್ಲಂಘನೆಯಂತ ಪ್ರಕರಣಗಳನ್ನು ಭೇದಿಸಲು ಅನುಕೂಲ ಆಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ ಮುಂದಾಗಿದೆ. ವಾಹನದ ನಂಬರ್ ಪ್ಲೇಟ್ನಲ್ಲೇ ಈ ತಂತ್ರಜ್ಞಾನ ಅಳವಡಿಸಲಾಗುತ್ತೆ. ಇದು ರಾಜ್ಯದಲ್ಲೂ ಜಾರಿಗೆ ಬರಲಿದ್ದು ಸಾರಿಗೆ ಇಲಾಖೆ ನಿಯಮಗಳನ್ನು ಸಿದ್ದಪಡಿಸಿದೆ. ಇದಕ್ಕಾಗಿ HSRP ತಯಾರಿಕ ಕಂಪನಿಗಳ ಆಯ್ಕೆ ಪ್ರಕ್ರಿಯೆ ಹಳಿತಪ್ಪಿದೆ. ಇದರಿಂದ ಸುಮಾರು 20,000ಕ್ಕೂ ಹೆಚ್ಚು ಕುಟುಂಬಗಳು ಬೀದಿ ಪಾಲಾಗುವ ಆತಂಕವಿದೆ ಎಂದು ಲೋಕೇಶ್ ರಾಮ್ ತಿಳಿಸಿದರು.
ಕೇಂದ್ರ ಹೆದ್ದಾರಿ ಸಚಿವಾಲಯವು HSRP ಯೋಜನೆಗಾಗಿ ವಿಶಿಷ್ಟ ತಂತ್ರಜ್ಞಾನದ ನಂಬರ್ ಪ್ಲೇಟ್ಗಳನ್ನು ತಯಾರಿಸುವ ಸುಮಾರು 20 ಕಂಪನಿಗಳಿಗೆ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೆಲವರ ಒತ್ತಡಕ್ಕೆ ಒಳಗಾಗಿ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗೆ ಅನುಮತಿ ನೀಡಲಾಗುತ್ತಿದೆ. ಸಾರಿಗೆ ಇಲಾಖೆಯ ಲಂಚದ ಆಸೆಯಿಂದ ಯೋಜನೆ ದಾರಿ ತಪ್ಪಲಿದೆಂದು ಅವರು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ