newsfirstkannada.com

POCSO Act: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ.. ಬಿಇಓಗೆ 5 ವರ್ಷ ಜೈಲು ಶಿಕ್ಷೆ ಪ್ರಕಟ

Share :

22-06-2023

    ಸರ್ಕಾರಿ ಅಧಿಕಾರಿಯ ಕಾಮ ಚಪಲಕ್ಕೆ ಕೋರ್ಟ್​ನಿಂದ ಶಿಕ್ಷೆ

    ಜಿಲ್ಲೆಯ ಹೂವಿನಹಡಗಲಿ ಬಿಇಓ ಅಧಿಕಾರಿಯಾಗಿದ್ದ BEO

    25 ಸಾವಿರ ದಂಡ ಪಾವತಿಸದಿದ್ದರೇ 6 ತಿಂಗಳು ಹೆಚ್ಚುವರಿ ಶಿಕ್ಷೆ

ಗದಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಇಓ ಅಧಿಕಾರಿಗೆ 5 ವರ್ಷ ಜೈಲು ಶಿಕ್ಷೆಯನ್ನು ಜಿಲ್ಲಾ ನ್ಯಾಯಾಲಯ ವಿಧಿಸಿ ಆದೇಶ ಹೊರಡಿಸಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಬಿಇಓ ಅಧಿಕಾರಿ ಶಂಕ್ರಪ್ಪ ಹಳ್ಳಿಗುಡಿಗೆ ಜಿಲ್ಲಾ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ. ದಂಡ ಪಾವತಿಸಲು ವಿಫಲವಾದ್ರೆ ಹೆಚ್ಚುವರಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ಬಿಇಓ ಆಗಿ ಸೇವೆ ಸಲ್ಲಿಸುತ್ತಿದ್ದ ಶಂಕ್ರಪ್ಪ, ಅಪ್ರಾಪ್ತೆ ಬಾಲಕಿ ಮನೆಗೆ ಭೇಟಿ ನೀಡಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿತ್ತು. ಅಧಿಕಾರಿ ವಿರುದ್ಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್​ ಶಿಕ್ಷೆ ಪ್ರಕಟಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

POCSO Act: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ.. ಬಿಇಓಗೆ 5 ವರ್ಷ ಜೈಲು ಶಿಕ್ಷೆ ಪ್ರಕಟ

https://newsfirstlive.com/wp-content/uploads/2023/06/GDG_BEO_OFFICER_JAIL.jpg

Load More