ಪಾಲಿಟೆಕ್ನಿಕ್ ಉಪನ್ಯಾಸಕ ಮಂಜುನಾಥ್. ಎ ವಿರುದ್ದ ಆಕ್ರೋಶ
ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಾವಿಗೆ ಶರಣಾದ ವಿದ್ಯಾರ್ಥಿ
ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದ ಬಳಿ ಗಜೇಂದ್ರ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಬಿಜಿಎಸ್ ಪಾಲಿಟೆಕ್ನಿಕ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ. ಗಜೇಂದ್ರ (18) ಆತ್ಮಹತ್ಯೆ ಮಾಡಿಕೊಂಡಿರೋ ವಿದ್ಯಾರ್ಥಿ. ಮೃತ ಗಜೇಂದ್ರ ಎರಡನೇ ವರ್ಷದ ಮೆಕಾನಿಕ್ ಬ್ಯಾಂಚ್ನಲ್ಲಿ ಓದುತ್ತಿದ್ದ.
ದೇವರಾಜ್ ಲಲಿತಮ್ಮ ದಂಪತಿ ಮಗನಾಗಿದ್ದನು. ಕಾಲೇಜಿನಲ್ಲಿ ಉಪನ್ಯಾಸಕ ಮಂಜುನಾಥ್.ಎ ಎನ್ನುವವರು ಕಿರುಕುಳ ನೀಡುತ್ತಿದ್ದರು. ಉಪನ್ಯಾಸಕ ನೀಡಿದ ಕಿರುಕುಳಕ್ಕೆ ಬೇಸತ್ತು ಗಜೇಂದ್ರ ತನ್ನ ಹುಟ್ಟೂರು ಮಳ್ಳಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಇನ್ನೂ ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಾವಿಗೆ ಶರಣಾಗಿದ್ದಾನೆ.
ವಿದ್ಯಾರ್ಥಿ ಆತ್ಮಹತ್ಯೆಯನ್ನ ಖಂಡಿಸಿ ಕಾಲೇಜಿನ ಎದುರು ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮಂಜುನಾಥ್ ಪರಾರಿಯಾಗಿದ್ದಾರೆ. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಮೂಲದ ನಿವಾಸಿ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಂದಿಗಿರಿಧಾಮ ಪಿಎಸ್ಐ ಹರೀಶ್ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ