ಮತ್ತೆ ಮರುಕಳಿಸಲಿದೆ ಭದ್ರಾವತಿಯ ‘ಸುವರ್ಣ ಯುಗ’
VSIL ಕಾರ್ಖಾನೆ ಆರಂಭಕ್ಕೆ ಕೇಂದ್ರ ಗ್ರೀನ್ ಸಿಗ್ನಲ್
ಕೇಂದ್ರಕ್ಕೆ ಧನ್ಯವಾದ ತಿಳಿಸಿದ ಸಂಸದ ಬಿ.ವೈ. ರಾಘವೇಂದ್ರ
ಭದ್ರಾವತಿ ಎಂದ ತಕ್ಷಣ ಎಲ್ಲರ ಕಣ್ಮುಂದೆ ಬರ್ತಿದ್ದು ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ. ಒಂದು ಕಾಲದಲ್ಲಿ ಭದ್ರಾವತಿಗೆ ಸುವರ್ಣ ಯುಗವನ್ನೇ ಧರೆಗಿಳಿಸಿದ್ದ ಕಾರ್ಖಾನೆ. ಆದ್ರೆ ನಷ್ಟದ ಸುಳಿಯಲ್ಲಿ ಸಿಲುಕಿ ಪ್ರಖ್ಯಾತ ಕಾರ್ಖಾನೆಗೆ ಬೀಗ ಬಿದ್ದಿತ್ತು. ನಷ್ಟದ ನೆಪ ಹೇಳಿ ಕೇಂದ್ರ ಸರ್ಕಾರ ಫ್ಯಾಕ್ಟರಿಯನ್ನ ಬಂದ್ ಮಾಡಿತ್ತು. ಇದೀಗ ಇದೀಗ ಕಾರ್ಖಾನೆ ವಿಚಾರದಲ್ಲಿ ಮಲೆನಾಡ ಜನರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ.. 1923ರಲ್ಲಿ ಭದ್ರಾವತಿಯಲ್ಲಿ ನಿರ್ಮಾಣವಾಗಿದ್ದ ಐರನ್ ಫ್ಯಾಕ್ಟರಿ.. ಆದ್ರೆ, ವಿಐಎಸ್‌ಎಲ್‌ಗೆ 100 ವರ್ಷ ತುಂಬಿರುವಾಗಲೇ ಕಾರ್ಖಾನೆಗೆ ಕರಾಳ ಛಾಯೆ ಆವರಿಸಿತ್ತು.. ನಷ್ಟದ ಸುಳಿಯಲ್ಲಿ ಸಿಲುಕಿ ಕಾರ್ಖಾನೆ ಬಾಗಿಲು ಮುಚ್ಚಿತ್ತು. ಇದೀಗ ಮತ್ತೆ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಮರುಜೀವ ಸಿಗುವ ಕಾಲ ಸನ್ನಿಹಿತವಾಗಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನೆಲೆಯೂರಿದ್ದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ 100 ವರ್ಷ ತುಂಬಿರುವಾಗಲೇ ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಗಣಿ ಇಲ್ಲದ ಕಾರಣ ಹಾಗೂ ನಷ್ಟದ ಕಾರಣದಿಂದ ವಿಐಎಸ್‌ಎಲ್ ಮುಚ್ಚುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಆದ್ರೆ, ವಿಐಎಸ್‌ಎಲ್ ಕಾರ್ಖಾನೆ ಮುಚ್ಚಬಾರದು ಅಂತಾ ಭಾರೀ ಹೋರಾಟ ನಡೆದಿತ್ತು. ಈ ಮಧ್ಯೆಯೂ ಕಾರ್ಖಾನೆಯನ್ನ ಕೇಂದ್ರ ಸರ್ಕಾರ ಬಂದ್ ಮಾಡಿತ್ತು. ಇದಾದ ಬಳಿಕ ಕಬ್ಬಿಣ ಮತ್ತು ಉಕ್ಕಿನ ಉತ್ಪಾದನೆ ಆರಂಭಿಸಬೇಕು ಎಂಬ ಆಗ್ರಹವೂ ಕೇಳಿಬಂದಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕಳೆದ ತಿಂಗಳು ವಿಐಎಸ್‌ಎಲ್ ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಕೇಂದ್ರ ಉಕ್ಕು ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಪತ್ರ ಬರೆದಿದ್ದರು. ಈಗ ಕೇಂದ್ರ ಸರ್ಕಾರ ಮತ್ತೆ ವಿಐಎಸ್‌ಎಲ್ ಆರಂಭಕ್ಕೆ ಅನುಮತಿ ನೀಡಿದೆ. ಇದೀಗ ಮತ್ತೆ ವಿಐಎಸ್‌ಎಲ್ ಕಾರ್ಖಾನೆಯ ಮರು ಕಾರ್ಯಾರಂಭಕ್ಕೆ ಭಾರತೀಯ ಉಕ್ಕು ಪ್ರಾಧಿಕಾರ ಅನುಮತಿ ನೀಡಿದೆ. ಆಗಸ್ಟ್ 10ರಿಂದ ಬಾರ್‌ಮಿಲ್ ಶುರುವಾಗಲಿದ್ದು, ಶೀಘ್ರದಲ್ಲಿಯೇ ವಿಐಎಸ್‌ಎಲ್ ಕಾರ್ಖಾನೆ ಕೆಲಸ ಶುರುಮಾಡಲಿದೆ.

ವಿಐಎಸ್ಎಲ್ ಕಾರ್ಖಾನೆ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡ್ತಿದ್ದಂತೆ ಶಿವಮೊಗ್ಗ ಸಂಸದ ಬಿ.ವೈ. ವಿಜಯೇಂದ್ರ ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಆರಂಭಕ್ಕೆ ಸಮ್ಮತಿ ನೀಡಿದ ಮೋದಿ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
‘ಭದ್ರಾವತಿ ಸುವರ್ಣಯುಗ ಆರಂಭ’
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಾರಂಭಕ್ಕೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಮತ್ತೆ ಭದ್ರಾವತಿಯ ಸುವರ್ಣಯುಗ ಆರಂಭವಾಗುತ್ತಿದೆ. ವಿಐಎಸ್ಎಲ್ ಮೈಕೊಡವಿ ಮೇಲೇಳುತ್ತಿದ್ದು, ಮತ್ತೆ ಕಪ್ಪು ಚಿನ್ನ ಫಳಫಳಿಸಲಿದೆ. ಭದ್ರಾವತಿಯ ಸಮಸ್ತ ಜನರ ಪ್ರಾರ್ಥನೆ ಫಲ ಕೊಟ್ಟಿದೆ. ಇಷ್ಟೆಲ್ಲಾ ಸವಾಲುಗಳನ್ನೆಲ್ಲಾ ಎದುರಿಸಿ ಗೆದ್ದ ಹೆಮ್ಮೆ ಶಿವಮೊಗ್ಗ ಜನರದ್ದು. ಕಾರ್ಖಾನೆ ಪುನಾರಂಭಕ್ಕೆ ಕಾರಣವಾದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾರಿಗೆ ಕೃತಜ್ಞತೆಗಳು-ಬಿ.ವೈ. ರಾಘವೇಂದ್ರ, ಶಿವಮೊಗ್ಗ ಸಂಸದ
ವಿಐಎಸ್‌ಎಲ್ ಕಾರ್ಖಾನೆ ಪುನಾರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡ್ತಿದ್ದಂತೆ ಕಾರ್ಖಾನೆ ನೌಕರರು ಹರ್ಷ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಗೆ ಅಗತ್ಯ ಬಂಡವಾಳ ಒದಗಿಸಿ ಆಧುನಿಕ ಯಂತ್ರೋಪಕರಣ ಅಳವಡಿಸುವಂತೆ ಕಾರ್ಮಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗದ ಜನರಿಗೆ ಕೇಂದ್ರದಿಂದ ಗುಡ್ನ್ಯೂಸ್; ಮತ್ತೆ ವಿಐಎಸ್ಎಲ್ ಆರಂಭ
ಒಟ್ಟಾರೆ ಭದ್ರಾವತಿಯ ಸುವರ್ಣ ಯುಗ ಮತ್ತೆ ಆರಂಭವಾಗುತ್ತಿದೆ. ಸದ್ಯ ಮುಚ್ಚಿದ್ದ ಕಾರ್ಖಾನೆಯನ್ನ ಪುನಶ್ಚೇತನಗೊಳಿಸಿ ಅದಕ್ಕೆ ಕಾಯಕಲ್ಪ ನೀಡಬೇಕಿದೆ. ಇದನ್ನೇ ನಂಬಿ ಜೀವನ ಸಾಗಿಸ್ತಿದ್ದ ಕಾರ್ಮಿಕರಿಗೆ ಮತ್ತೆ ಜೀವನ ಕಟ್ಟಿಕೊಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ