/newsfirstlive-kannada/media/post_attachments/wp-content/uploads/2025/05/OPARATION-SINDOOR-2.jpg)
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ವರದಿಗಳ ಪ್ರಕಾರ ಸುಮಾರು 70ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೇಷನ್ ಸಿಂಧೂರ್ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಭಾರತ್ ಮಾತಾಕೀ ಜೈ ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.
भारत माता की जय!
— Rajnath Singh (@rajnathsingh) May 6, 2025
ಇದನ್ನೂ ಓದಿ: 26 ಅಮಾಯಕ ಹೆಣ್ಮಕ್ಕಳ ಸಿಂಧೂರ ಅಳಿಸಿದ ಪ್ರತೀಕಾರವೇ ‘ಆಪರೇಷನ್ ಸಿಂಧೂರ..’
ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ವೇಳೆ ಒಟ್ಟು 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತವು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ- ತೈಯ್ಬಾ (ಎಲ್‌ಇಟಿ)ಗೆ ಸಂಬಂಧವಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಎಂಬ ಗುಂಪು ಕಾರಣ ಎಂದು ಹೇಳಿತ್ತು. ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತ ಹೇಳಿತ್ತು. ಅಂತೆಯೇ ಇಂದು ರಾತ್ರಿಯಿಂದ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಆರಂಭಿಸಿದೆ. ಈ ಆಪರೇಷನ್ ಸಿಂಧೂರದಲ್ಲಿ ಭಾರತೀಯ ಭೂಸೇನೆ ಹಾಗೂ ವಾಯುಸೇನೆ ಜಂಟಿಯಾಗಿದೆ ನಡೆಸುತ್ತಿವೆ.
ಇದನ್ನೂ ಓದಿ: ಜಸ್ಟ್ 23 ನಿಮಿಷ..! ಆಪರೇಷನ್ ಸಿಂಧೂರಗೆ ನಡುಗಿದ ಪಾಕ್.. ಏನೆಲ್ಲ ಆಗೋಯ್ತು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ