ರಾಷ್ಟ್ರೀಯ ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ಭವ್ಯಾ ನರಸಿಂಹಮೂರ್ತಿ
ಕಾಂಗ್ರೆಸ್ ರಾಷ್ಟ್ರೀಯ ಸಮನ್ವಯಾಧಿಕಾರಿ ಪಟ್ಟಿಯಲ್ಲಿ ಹೊಸ ಜವಾಬ್ದಾರಿ
ಲೋಕಸಭಾ ಚುನಾವಣೆ ಎದುರಿಸಲು ಹೊಸ ತಂಡ ಕಟ್ಟಿದ ಕಾಂಗ್ರೆಸ್
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗವನ್ನು ಪುನಾರಚಿಸಿದ್ದಾರೆ. ರಾಷ್ಟ್ರೀಯ ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ರಾಜ್ಯದ ಭವ್ಯಾ ನರಸಿಂಹಮೂರ್ತಿ ಅವರಿಗೆ ಸ್ಥಾನ ದೊರಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿರುವ 37 ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ಭವ್ಯಾ ನರಸಿಂಹಮೂರ್ತಿ ಅವರು ಸ್ಥಾನ ಪಡೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲರಾಗಿರುವ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದೀಗ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ಕಾಂಗ್ರೆಸ್, ಪಕ್ಷ ಸಂಘಟನೆಯ ಹಿನ್ನೆಲೆ ಸಾಮಾಜಿಕ ಜಾಲತಾಣ ವಿಭಾಗವನ್ನು ಪುನಾರಚಿಸಿದೆ.
ಕಾಂಗ್ರೆಸ್ ರಾಷ್ಟ್ರೀಯ ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದಕ್ಕೆ ಭವ್ಯಾ ನರಸಿಂಹಮೂರ್ತಿ ಅವರು ವಿಶೇಷ ಧನ್ಯವಾದ ತಿಳಿಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸಂಯೋಜಕಿಯಾಗಿ ನನ್ನನ್ನು ನೇಮಕಮಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರ್, ಸುಪ್ರಿಯಾ ಶ್ರೀನಾತೆ ಹಾಗೂ ಪ್ರಿಯಾಂಕಾ ಖರ್ಗೆ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ