/newsfirstlive-kannada/media/post_attachments/wp-content/uploads/2024/11/Bidar-School-Boy-Accident.jpg)
ಬೀದರ್: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಘಟನೆ ಔರಾದ್ ತಾಲೂಕು ಜಿರಗಾ ಕ್ರಾಸ್ ಬಳಿ ನಡೆದಿದೆ. ಬಾಲಕ ವಿಕಾಸ್​ ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಗುದ್ದಿದೆ.
ಹೆದ್ದಾರಿಯಲ್ಲಿ ಬಾಲಕನಿಗೆ ಕಾರು ಗುದ್ದಿದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೀದರ್ ಟು ನಾಂದೇಡ್ ರಾಷ್ಟ್ರೀಯ ಹೆದ್ದಾರಿಯ ಜಿರಗಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.
/newsfirstlive-kannada/media/post_attachments/wp-content/uploads/2024/11/Bidar-School-Boy-Accident-2.jpg)
ಕಾರು ಗುದ್ದಿದ ರಭಸಕ್ಕೆ ಕಾರಿನ ಮೇಲೆ ಹಾರಿದ್ದು, ಬಾಲಕ ವಿಕಾಸ್‌ನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಬಾಲಕನನ್ನ ಬೀದರ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ಸ್ಥಳದಲ್ಲಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
/newsfirstlive-kannada/media/post_attachments/wp-content/uploads/2024/11/Bidar-School-Boy-Accident-1.jpg)
ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಭಯಾನಕ ಕೃತ್ಯ; ಯುವತಿ ಜೀವ ತೆಗೆದು ಪ್ರಿಯಕರ ಎಸ್ಕೇಪ್!
ಈ ಹೆದ್ದಾರಿಯಲ್ಲಿ ನಿರಂತರ ಅಪಘಾತಗಳು ಸಂಭವಿಸಿತ್ತಿದೆ. ಅಪಘಾತ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು, ಸ್ಥಳೀಯರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂತಪೂರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us