ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ, ಪ್ರಕರಣ ದಾಖಲು
ರಭಸವಾಗಿ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು
ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು
ಬೀದರ್: ದೇವರ ದರ್ಶನ ಮುಗಿಸಿಕೊಂಡು ಬರುತ್ತಿದ್ದ ಬೈಕ್ಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಿಕಾಪೂರ ಗ್ರಾಮದಲ್ಲಿ ನಡೆದಿದೆ.
ಬಾಲ್ಕಿ ತಾಲೂಕಿನ ಎಣಿಕೂರ್ ಗ್ರಾಮದ ಬೈಕ್ ಸವಾರ ಬಾಲಾಜಿ ವಿಠಲ್ (41) ಸಾವನ್ನಪ್ಪಿದ ದುರ್ದೈವಿ. ಇನ್ನೊಬ್ಬ ಬೈಕ್ ಸವಾರ ಪ್ರಕಾಶ್ ಎನ್ನುವರ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಇಬ್ಬರು ಬಾಲ್ಕಿ ಮೂಲದ ಎಣಿಕೂರ್ ಗ್ರಾಮದವರಾಗಿದ್ದಾರೆ.
ಇವರು ಮಹಾರಾಷ್ಟ್ರದ ತುಳಜಾಪೂರ ಭವಾನಿ ಮಾತಾ ದರ್ಶನ ಮಾಡಿಕೊಂಡು ಸ್ವ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ಚಂಡಿಕಾಪೂರ ಗ್ರಾಮದ ಬಳಿ ಆಗಮಿಸುತ್ತಿರುವಾಗ ಕಾರೊಂದು ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ