‘ಡಬಲ್ ಇಸ್ಮಾರ್ಟ್’ ಸಿನಿಮಾ ಅಂಗಳಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಎಂಟ್ರಿ
ಹಿಂದೆಂದೂ ಕಾಣದ ರೀತಿಯಲ್ಲಿ ತೆರೆ ಮೇಲೆ ತರಲು ನಿರ್ದೇಶಕ ಪುರಿ ಜಗನ್ನಾಥ್
ಸೌತ್ ಸಿನಿಮಾಗಳದತ್ತ ಚಿತ್ತ ಹರಿಸಿದ ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್
ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್. ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕಾಗಿ ರಾಮ್ ಕಂಪ್ಲೀಟ್ ಲುಕ್ ಬದಲಿಸಿದ್ದು, ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಪುರಿ ಕನೆಕ್ಟ್ ಬ್ಯಾನರ್ ನಡಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಅದ್ಧೂರಿಯಾಗಿ ನಿರ್ಮಿಸುತ್ತಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾ ಅಂಗಳಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಎಂಟ್ರಿಯಾಗಿದೆ.
ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್ ಇತ್ತೀಚೆಗೆ ಸೌತ್ ಸಿನಿಮಾಗಳದತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಚಿತ್ರದ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜು ಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿದೆ ಶುಭ ಕೋರಿದೆ. ಗಡ್ಡ ಬಿಟ್ಟು ಬಿಟ್ಟು ಸ್ಟೈಲೀಶ್ ಲುಕ್ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ.
ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾಗೆ ಹಾಲಿವುಡ್ ಗಿಯಾನಿ ಜಿಯಾನೆಲ್ಲಿ ಕ್ಯಾಮೆರಾ ಹಿಡಿಯಲಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.
It takes me immense pride to be working with the director of the masses #PuriJagannadh ji and the young energetic Ustaad @ramsayz 🤗
Glad to be Playing the #BIGBULL in this sci-fi mass entertainer #DoubleISMART
Excited to be teaming up with this super-talented team and Looking… pic.twitter.com/SrIAJv6yy1
— Sanjay Dutt (@duttsanjay) July 29, 2023
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ