/newsfirstlive-kannada/media/post_attachments/wp-content/uploads/2025/03/Siddaramaiah-on-Koppal-Industries.jpg)
ಕೊಪ್ಪಳದ ಕೈಗಾರಿಕಾ ಪ್ರದೇಶ ಹಾಲವರ್ತಿಯಲ್ಲಿ ಬಲ್ದೋಟಾ ಕಂಪನಿಯಿಂದ ಉಕ್ಕಿನ ಕಾರ್ಖಾನೆ ನಿರ್ಮಾಣ ಮಾಡಲಾಗುತ್ತಿತ್ತು. ಜರ್ಮನ್ ತಂತ್ರಜ್ಞಾನವನ್ನು ಬಳಸಿ ಉಕ್ಕಿನ ಕಾರ್ಖಾನೆ ನಿರ್ಮಾಣ ಮಾಡಲಾಗುತ್ತಿದ್ದು, ಈಗಾಗಲೆೇ ಕಾರ್ಖಾನೆಗಳ ಹೊಗೆಯಿಂದ ಇಲ್ಲಿನ ಗ್ರಾಮಸ್ಥರು ನಲುಗಿ ಹೋಗಿದ್ದಾರೆ. ಕಾರ್ಖಾನೆ ಹೊರಸೂಸುವ ಹೊಗೆ, ಧೂಳಿನಿಂದ ಪರಿಸರ ಕಲುಷಿತ ಆಗಿದೆ. ಗ್ರಾಮದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದು, ರೈತರು ಬೆಳೆದ ಬೆಳೆಗಳಿಗೆ ಹಾನಿಯಾಗುತ್ತಿದೆ.
ಬಲ್ದೋಟಾ ಕಂಪನಿಯ ಉಕ್ಕಿನ ಕಾರ್ಖಾನೆ ನಿರ್ಮಾಣಕ್ಕೆ ಜಿಲ್ಲೆಯ ಜನರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ನ್ಯೂಸ್ ಫಸ್ಟ್ ಚಾನೆಲ್ ನಿರಂತರ ವರದಿ ಪ್ರಸಾರ ಮಾಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.
ಕೊಪ್ಪಳ ಬಲ್ದೋಟ ಕಾರ್ಖಾನೆ ವಿರೋಧಿ ಹೋರಾಟಗಾರರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿತ್ತು. ಈ ವೇಳೆ ಬಲ್ದೋಟ ಕಾರ್ಖಾನೆ ಆರಂಭಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದ್ದು, ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕಾರ್ಖಾನೆ ಕೆಲಸವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಉಕ್ಕಿನ ಕಾರ್ಖಾನೆಯ ಹೊಗೆಗೆ ತತ್ತರಿಸಿದ ಕೊಪ್ಪಳ; ಜನರ ದುರ್ಗತಿ ಕಂಡು ಗವಿಮಠದ ಶ್ರೀ ಕಣ್ಣೀರು
ಇತ್ತೀಚೆಗೆ BSPL_MSPL ಕಾರ್ಖಾನೆ ನಿರ್ಮಾಣ ವಿರೋಧಿಸಿ ಕೊಪ್ಪಳ ಬಂದ್‌ಗೂ ಕರೆ ನೀಡಲಾಗಿತ್ತು. ಬಂದ್‌ಗೆ ಗವಿಮಠದ ಶ್ರೀಗವಿಸಿದ್ದೇಶ್ವರ ಶ್ರೀ ಬೆಂಬಲ ವ್ಯಕ್ತಪಡಿಸಿದ್ದರು. ತಾಲೂಕು ಕ್ರೀಡಾಂಗಣದಲ್ಲಿ ಕಾರ್ಖಾನೆ ಹಠಾವೋ ಕೊಪ್ಪಳ ಬಚಾವೋ ಬಹಿರಂಗ ಸಭೆ ನಡೆಸಲಾಗಿತ್ತು. ಈ ವೇಳೆ ಜನರು ಕಾರ್ಖಾನೆ ಹೊಗೆಯಿಂದ ನರಳಾಡುತ್ತಿರುವ ವಿಡಿಯೋ ಪ್ರದರ್ಶನ ಮಾಡಲಾಗಿದ್ದು, ಕಾರ್ಖಾನೆಯಿಂದ ಆದ ನರಳಾಟದ ವಿಡಿಯೋ ನೋಡಿ ಗವಿಮಠದ ಶ್ರೀಗಳು ಕಣ್ಣೀರು ಹಾಕಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ