/newsfirstlive-kannada/media/post_attachments/wp-content/uploads/2024/12/Jasprit_Bumrah_ROHIT.jpg)
ಮೆಲ್ಬೋರ್ನ್ ಟೆಸ್ಟ್ ಬೆನ್ನಲ್ಲೇ ಆಸ್ಟ್ರೇಲಿಯಾ 2024ರ ಅತ್ಯುತ್ತಮ ಟೆಸ್ಟ್ ತಂಡ ಆಯ್ಕೆ ಮಾಡಿದೆ. ಈ ತಂಡಕ್ಕೆ ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಕ್ಯಾಪ್ಟನ್ ಎಂದು ಘೋಷಿಸಿ ಆಸ್ಟ್ರೇಲಿಯಾ ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಸದ್ಯ ನಡೆಯುತ್ತಿರೋ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. 4 ಟೆಸ್ಟ್ ಪಂದ್ಯಗಳಲ್ಲಿ ಬರೋಬ್ಬರಿ 30 ವಿಕೆಟ್ ಕಬಳಿಸಿದ್ದಾರೆ. 3 ಬಾರಿ 5 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ.
ಆಸ್ಟ್ರೇಲಿಯಾ ಆಯ್ಕೆ ಮಾಡಿದ ಪ್ಲೇಯಿಂಗ್ ಎಲೆವೆನ್ ಹೀಗಿದೆ!
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025ರ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ಇಂಗ್ಲೆಂಡ್ ವಿಫಲವಾಗಿದೆ. ಆದ್ರೂ ಇಂಗ್ಲೆಂಡ್ ತಂಡದ ಆಟಗಾರರು ಮೇಲುಗೈ ಸಾಧಿಸಿದ್ದಾರೆ. ಆಸ್ಟ್ರೇಲಿಯಾ ಆಯ್ಕೆ ಮಾಡಿದ 2024ರ ಅತ್ಯುತ್ತಮ ಟೆಸ್ಟ್ ಪ್ಲೇಯಿಂಗ್ ಎಲೆವೆನ್ನಲ್ಲಿ ಬೆನ್ ಡಕೆಟ್, ಜೋ ರೂಟ್ ಮತ್ತು ಯುವ ಆಟಗಾರ ಹ್ಯಾರಿ ಬ್ರೂಕ್ ಸ್ಥಾನ ಪಡೆದಿದ್ದಾರೆ. ಬುಮ್ರಾ ಜತೆಗೆ ಟೀಮ್ ಇಂಡಿಯಾದ ಯುವ ಬ್ಯಾಟರ್ ಜೈಸ್ವಾಲ್ ಕೂಡ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾದ ಜೋಶ್ ಹೇಜಲ್ವುಡ್ ಮತ್ತು ಅಲೆಕ್ಸ್ ಕ್ಯಾರಿ ಕೂಡ ವರ್ಷದ ಅತ್ಯುತ್ತಮ ತಂಡದ ಭಾಗವಾಗಿದ್ದಾರೆ. ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್, ಶ್ರೀಲಂಕಾದ ಕಮಿಂದು ಮೆಂಡಿಸ್, ನ್ಯೂಜಿಲೆಂಡ್ ತಂಡದ ರಚಿನ್ ರವೀಂದ್ರ ಮತ್ತು ಮ್ಯಾಟ್ ಹೆನ್ರಿ ಪ್ಲೇಯಿಂಗ್ ಎಲೆವೆನ್ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
2024ರ ಕ್ರಿಕೆಟ್ ಆಸ್ಟ್ರೇಲಿಯಾದ ಬೆಸ್ಟ್ ಪ್ಲೇಯಿಂಗ್-11
ಯಶಸ್ವಿ ಜೈಸ್ವಾಲ್, ಬೆನ್ ಡಕೆಟ್, ಜೋ ರೂಟ್, ರಚಿನ್ ರವೀಂದ್ರ, ಹ್ಯಾರಿ ಬ್ರೂಕ್, ಕಮಿಂದು ಮೆಂಡಿಸ್, ಅಲೆಕ್ಸ್ ಕ್ಯಾರಿ (ವಿಕೆಟ್-ಕೀಪರ್), ಕೇಶವ್ ಮಹಾರಾಜ್, ಮ್ಯಾಟ್ ಹೆನ್ರಿ, ಜಸ್ಪ್ರೀತ್ ಬುಮ್ರಾ (ನಾಯಕ), ಜೋಶ್ ಹೇಜಲ್ವುಡ್.
ಇದನ್ನೂ ಓದಿ:ಭಾರತಕ್ಕೆ ದೊಡ್ಡ ಆಘಾತ ಕೊಟ್ಟ ಕ್ಯಾಪ್ಟನ್ ರೋಹಿತ್; ಟೆಸ್ಟ್ ನಿವೃತ್ತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ರು!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ