/newsfirstlive-kannada/media/post_attachments/wp-content/uploads/2025/04/Darshan-mother.jpg)
ರೇಣುಕಾಸ್ವಾಮಿ ಕೇಸ್‌ನಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಅವರು ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ರಾಜಸ್ಥಾನದ ವಿವಿಧ ಜಾಗಗಳಲ್ಲಿ ಡೆವಿಲ್ ಸಿನಿಮಾ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಇಂದು ದರ್ಶನ್‌ಗೆ ಸುಪ್ರೀಂಕೋರ್ಟ್ ವಿಚಾರಣೆ ಟೆನ್ಷನ್ ಇತ್ತು.
ಸುಪ್ರೀಂಕೋರ್ಟ್‌ನಲ್ಲಿ ಇವತ್ತು ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇತ್ತು. ಈ ಬಗ್ಗೆ ನಿನ್ನೆ ಕರ್ನಾಟಕ ಸರ್ಕಾರದ ಪರ ವಕೀಲರು ಪ್ರಸ್ತಾಪಿಸಿದ್ದು ಇಂದು ಪ್ರಸ್ತಾಪಿಸುವಂತೆ ನ್ಯಾಯಮೂರ್ತಿಗಳು ಸೂಚಿಸಿದ್ದರು. ಆದರೆ ನ್ಯಾಯಪೀಠದ ಸದಸ್ಯರು ಬದಲಾಗಿರುವ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.
ಏಪ್ರಿಲ್ 22ಕ್ಕೆ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಇದಕ್ಕೂ ಮುನ್ನ 3 ಬಾರಿ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದ್ದು, ಇದೀಗ ಏಪ್ರಿಲ್ 22ಕ್ಕೆ ಅರ್ಜಿ ವಿಚಾರಣೆ ನಡೆಸೋದಾಗಿ ನ್ಯಾಯಾಧೀಶರು ಹೇಳಿದ್ದಾರೆ.
ನಂಜುಂಡೇಶ್ವರನ ದರ್ಶನ ಪಡೆದ ಮೀನಮ್ಮ!
ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯೋ ಟೆನ್ಷನ್ ಮಧ್ಯೆಯೇ ದರ್ಶನ್ ತಾಯಿ ಮೀನಾ ತೂಗುದೀಪ ಅವರು ಇಂದು ಶ್ರೀನಂಜುಂಡೇಶ್ವರನ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ: ನಿತ್ಯಾನಂದ ಬದುಕಿದ್ದಾರಾ? ದೇಹತ್ಯಾಗ ಮಾಡಿದ್ದಾರಾ? ಕೊನೆಗೂ ‘ಕೈಲಾಸದಿಂದ ಬಂತು ಅತಿ ದೊಡ್ಡ ಸುದ್ದಿ‘!
ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯ ದಕ್ಷಿಣ ಕಾಶಿ ಎಂದೇ ಕರೆಯಲಾಗುತ್ತದೆ. ಮೀನಾ ತೂಗುದೀಪ ಅವರು ಇಂದು ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಂಜುಂಡೇಶ್ವರ ಸ್ವಾಮಿಯ ದರ್ಶನದ ಬಳಿಕ ಮಾತನಾಡಿದ ಮೀನಾ ತೂಗುದೀಪ ಅವರು ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಂಜುಂಡೇಶ್ವರನ ಬಳಿ ಬೇಡಿಕೊಂಡಿದ್ದೇನೆ. ನನ್ನ ಮಗ ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿದ್ದಾನೆ. ದೇವರ ಆಶೀರ್ವಾದ ಅವನ ಮೇಲಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ