ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕೊನೆಗೂ ಬಿಗ್ ರಿಲೀಫ್
ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್‌ಗೆ ನಿಟ್ಟುಸಿರು
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಮತ್ತು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಸಚಿವ ಸಂಪುಟದ ಆದೇಶವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು. ಲೋಕಾಯುಕ್ತ ತನಿಖೆ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರ ಎರಡೂ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಇಂದು ಮಹತ್ವದ ದಿನ; ಡಿಸಿಎಂ ಡಿಕೆಶಿಗೂ ಟೆನ್ಷನ್, ಟೆನ್ಷನ್..!
ಹೈಕೋರ್ಟ್ ವಿಭಾಗೀಯ ಪೀಠದ ನ್ಯಾ.ಕೆ ಸೋಮಶೇಖರ್ & ನ್ಯಾ. ಉಮೇಶ್ ಅವರ ಪೀಠ ಇಂದು ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಬಿಐ & ಯತ್ನಾಳ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್ ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂಕೋರ್ಟ್‌ಗೆ ಹೋಗಲಿದೆ. ಸಿಬಿಐ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ತನಕ ಡಿ.ಕೆ ಶಿವಕುಮಾರ್ ಅವರು ನಿಟ್ಟುಸಿರು ಬಿಡಬಹುದಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ