newsfirstkannada.com

BREAKING: ಕಾಂಗ್ರೆಸ್ ಪಕ್ಷಕ್ಕೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್; 3,500 ಕೋಟಿ ರೂ. ವಸೂಲಿಗೆ ಬ್ರೇಕ್‌!

Share :

Published April 1, 2024 at 12:26pm

Update April 1, 2024 at 12:27pm

    ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರ

    ಈಗಾಗಲೇ ಬ್ಯಾಂಕ್ ಖಾತೆ ಜಪ್ತಿ ಮಾಡಿ 135 ಕೋಟಿ ರೂ. ವಸೂಲಿ

    ಕಾಂಗ್ರೆಸ್ ಪಕ್ಷದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಐ.ಟಿಗೆ ಸೂಚನೆ

ನವದೆಹಲಿ: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುಪ್ರೀಂಕೋರ್ಟ್‌ನಿಂದ ಬಿಗ್‌ ರಿಲೀಫ್ ಸಿಕ್ಕಿದೆ. ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಲೋಕಸಭಾ ಎಲೆಕ್ಷನ್ ಹೊತ್ತಿನಲ್ಲಿ ಬಾಕಿ ಇರುವ ಕೋಟ್ಯಾಂತರ ರೂಪಾಯಿ ತೆರಿಗೆ ಪಾವತಿಸಲು IT ಇಲಾಖೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಕಾಂಗ್ರೆಸ್ ಪಕ್ಷದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಹೇಳಿದೆ.

ಸುಪ್ರೀಂಕೋರ್ಟ್ ಮಹತ್ವದ ಸೂಚನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 3,500 ಕೋಟಿ ರೂ. ವಸೂಲಿಗೆ ಯತ್ನಿಸಲ್ಲ ಎಂದು ಐ.ಟಿ. ಇಲಾಖೆ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಲೋಕಸಭಾ ಚುನಾವಣೆ ಬಳಿಕ ಐಟಿ ನೋಟಿಸ್ ಸಂಬಂಧ ಮತ್ತೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತೀರ್ಮಾನಿಸಿದೆ. ಜೂನ್ 4 ರಂದು ಲೋಕಸಭಾ ಚುನಾವಣೆಯ ರಿಸಲ್ಟ್‌ ಹೊರ ಬೀಳಲಿದೆ. ಜೂನ್ 24ರಂದು ಐ.ಟಿ. ನೋಟಿಸ್ ವಿರುದ್ಧ ಕಾಂಗ್ರೆಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್​​ಗೆ ಸಂಕಷ್ಟ; ಮೋದಿ ಕೆಂಡಾಮಂಡಲ!

ಸುಪ್ರೀಂಕೋರ್ಟ್‌ ವಿಚಾರಣೆ ವೇಳೆ ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದರು. ನಮ್ಮದು ಆದಾಯ ಗಳಿಸುವ ಸಂಘಟನೆಯಲ್ಲ. ನಮ್ಮದು ಬರೀ ರಾಜಕೀಯ ಪಕ್ಷ ಮಾತ್ರ. ಈಗಾಗಲೇ ಬ್ಯಾಂಕ್ ಖಾತೆ ಜಪ್ತಿ ಮಾಡಿ 135 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ ಎಂದಿದ್ದಾರೆ. ಸುಪ್ರೀಂಕೋರ್ಟ್‌ ಜಸ್ಟೀಸ್ ಬಿ.ವಿ. ನಾಗರತ್ನ ನೇತೃತ್ವದ ಪೀಠದಲ್ಲಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೀತು.

IT ಇಲಾಖೆ ವಾದವೇನು?
ಸುಪ್ರೀಂಕೋರ್ಟ್‌ನಲ್ಲಿ ಐ.ಟಿ ಇಲಾಖೆಯ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ 3,500 ಕೋಟಿ ರೂ ಆದಾಯ ತೆರಿಗೆ ಪಾವತಿಗೆ ಬೇಡಿಕೆ ಇದೆ. ಮೆರಿಟ್ ಮೇಲೆ ಬಹಳಷ್ಟನ್ನು ಹೇಳಬೇಕಾಗಿದೆ. ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಹಣ ವಸೂಲಿಗೆ ಕ್ರಮ ಕೈಗೊಳ್ಳಲ್ಲ. ಜೂನ್ 2ನೇ ವಾರದಲ್ಲಿ ಅರ್ಜಿ ವಿಚಾರಣೆಗೆ ಐ.ಟಿ ಇಲಾಖೆ ಮನವಿ ಮಾಡಿದೆ. ಹೀಗಾಗಿ ಜೂನ್ 24 ರಂದು ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಮುಂದಿನ ದಿನಾಂಕ ನಿಗದಿಪಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕಾಂಗ್ರೆಸ್ ಪಕ್ಷಕ್ಕೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್; 3,500 ಕೋಟಿ ರೂ. ವಸೂಲಿಗೆ ಬ್ರೇಕ್‌!

https://newsfirstlive.com/wp-content/uploads/2024/03/Rahul-Gandi-1.jpg

Load More